ಹಾಸನ

ಸಸಿ ವಿತರಣೆಗಿಂತ ಪೋಷಣೆ ಮುಖ್ಯ: ಶಾಸಕ ಬಾಲಕೃಷ್ಣ

Published On :

ಚನ್ನರಾಯಪಟ್ಟಣ: ಪರಿಸರ ಸಂರಕ್ಷಣೆ ತಮ್ಮೆಲ್ಲರ ಜವಬ್ದಾರಿಯಾಗಿದ್ದು, ಅದರ ಉಳಿವಿಗಾಗಿ ಗಿಡ ನೆಟ್ಟು ಪೋಷಣೆ ಮಾಡುವ ಉದ್ದೇಶದಿಂದ ತಾಲೂಕಿನಲ್ಲಿ 1.4ಲಕ್ಷ ಗಿಡಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ ಎಂದು  ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಪಟ್ಟಣದ ಗಣಪತಿ ಪೆಂಡಾಲ್ನಲ್ಲಿ ಅರಣ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ವೃಕ್ಷ ರಕ್ಷಾ ಆಂದೋಲನ ಕಾರ್ಯಕ್ರಮಕ್ಕೆ ಗಿಡ ನೆಡುವ ಮುಖೇನ ಚಾಲನೆ ನೀಡಿ ಮಾತನಾಡಿ, ಪರಿಸರ ಸಂರಕ್ಷಣೆಗೆ ಗಿಡ ಮರಗಳನ್ನು ನೆಟ್ಟು ಪೋಷಣೆ ಮಾಡುವುದು ಅಗತ್ಯವಿದೆ ಎಂದರು.  ಸರ್ಕಾರದ ಕಾರ್ಯಕ್ರಮದಂತೆ ಗಿಡಗಳನ್ನು ಹಂಚಿಕೆ ಮಾಡುವುದು ಮುಖ್ಯವಲ್ಲ. ಅವುಗಳನ್ನು ಪೋಷಣೆ ಮತ್ತು ಪಾಲನೆ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ರೈತರು ಯಾವ ಕ್ರಮಗಳನ್ನು ಅನುಸರಣೆ ಮಾಡಬೇಕು ಎಂಬುದರ ಕುರಿತು ಹೋಬಳಿ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ಪಟ್ಟಣದ ಹೊರವಲಯದ ಬೆಲಸಿಂದ ಶ್ರೀವನವನ್ನು ರಕ್ಷಿಸುವ ಉದ್ದೇಶದಿಂದ 280 ಎಕರೆ ಪ್ರದೇಶಕ್ಕೆ ತಂತಿ ಬೇಲಿ ಹಾಕಿಸಲು 50 ಲಕ್ಷ ಅನುದಾನ ಮಂಜೂರಾಗಿದ್ದು, ಶಾಸಕ ಅನುದಾನದಲ್ಲಿಯೂ ಶ್ರೀವನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅನುದಾನ ನೀಡಲಾಗುವುದ ಎಂದು ತಿಳಿಸಿದರು. ಪರಿಸರ ಪ್ರೇಮಿ ಚ.ನಂ. ಅಶೋಕ್, ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್, ವಲಯ ಅರಣ್ಯಾಧಿಕಾರಿ ಧರ್ಮಪ್ಪ, ನವೋದಯ ವಿದ್ಯಾ ಸಂಸ್ಥೆ ನಿರ್ದೇಶಕ ರಮೇಶ್, ಆರ್ಸಿ ಕಾಳೇಗೌಡ ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.