ಕೆರೆಗಳಿಗೆ ನೀರು ಹರಿಸಲು ಒತ್ತಾಯಿಸಿ 11ಕ್ಕೆ ಬಂದ್
ಅರಸೀಕೆರೆ: ಬರದಿಂದ ತತ್ತರಿಸಿರುವ ತಾಲೂಕಿನ ಕೆರೆ ಕೆರೆಗಳಿಗೆ ನದಿಮೂಲದಿಂದ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಕರವೇ ಕನ್ನಡಪರ ಹೋರಾಟಗಾರರು, ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಜು.11ರ ಶುಕ್ರವಾರ ಅರಸೀಕೆರೆ ಬಂದ್ಗೆ ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ, ಹಾರನಹಳ್ಳಿ ಅಶೋಕ್, ಜನರಲ್ ಅಡ್ವೋಕೇಟ್ ಹಾಗೂ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಹಿಸಲಿದ್ದಾರೆ ಎಂದರು.
ಅಂದಿನ ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್. ಎಂ. ವಿಶ್ವೇಶ್ವರಯ್ಯನವರು ಪೂರ್ವರ ಚಿಂತನೆಯಿಂದ ಕೆರೆಗಳ ನೀರಿನ ಸಂರಕ್ಷಣೆಗಾಗಿ ರೂಪಿಸಿದ ಬೇಲೂರಿನ ಯಗಚಿ ಜಲಾಶಯದ ಯೋಜನೆ ಅನುಷ್ಠಾನದಿಂದ ಅರಸೀಕೆರೆ ತಾಲೂಕಿಗೆ ನೀರನ್ನು ಸರಬರಾಜು ಮಾಡಬಹುದಾಗಿದೆ. ಆದರೆ ಇಲ್ಲಿನ ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಭಾವನೆಯಿಂದ ಅನೇಕ ವರ್ಷಗಳು ಕಳೆದರೂ ಈ ಯೋಜನೆ ಕಾರ್ಯರೂಪಕ್ಕೆ ಬಾರದೆ. ಸತತ ಬರಗಾಲಕ್ಕೆ ಸಿಕ್ಕಿ ನಲುಗುತ್ತಿರುವ ತಾಲೂಕಿನ ಜನತೆ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಂಪೇಗೌಡ ವೇದಿಕೆ ಗೌರವಾಧ್ಯಕ್ಷ ಕೆ.ವಿ. ರಾಜಣ್ಣ, ಹಾರನಹಳ್ಳಿ ಗ್ರಾಪಂ ಸದಸ್ಯ ಓಂಕಾರಮೂರ್ತಿ, ಡಿ.ಎಂ. ಕುರ್ಕೆ ಜಯದೇವ್ ಹಾಗೂ ಆಶಿಷ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

