ಪ್ರಿಕಾಟ್ ಮೆರಿಡೆನ್ ಕಾರ್ಮಿಕರ ಮುಷ್ಕರ 2 ನೇ ದಿನಕ್ಕೆ
ಹಾಸನ: ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರಿಕಾಟ್ ಮೆರಿಡೆನ್ ಕಾರ್ಮಿಕರು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದ ಹೊರವಲಯದ ಕೈಗಾರಿಕ ಪ್ರದೇಶದಲ್ಲಿ ಇರುವ ಪ್ರಿಕಾಟ್ ಮೆರಿಡೆನ್ ಕಾರ್ಖಾನೆಯ ಕಾರ್ಮಿಕರು ಕೆಲಸ ಬಹಿಷ್ಕರಿಸಿ ಕಾರ್ಖಾನೆಯ ಮುಂದೆ ಆರಂಭಿಸಿರುವ ಧರಣಿಯನ್ನು ಮುಂದುವರೆಸಿದ್ದಾರೆ.
ವೇತನ ನೀಡುತ್ತಿಲ್ಲ: ಕಾರ್ಖಾನೆಯವರು ಕಳೆದ ಎರಡು ವರ್ಷಗಳ ಹಿಂದೆ ಕಾಲೇಜ್‌ಗಳಲ್ಲಿ ಕ್ಯಾಂಪಸ್ ಸೆಲೆಕ್ಷನ್ ಮೂಲಕ ಟ್ರೈನಿ ಆಪರೇಟರ್ ಕೆಲಸಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದರು. ಮೊದಲ ವರ್ಷ ವೇತನ ನೀಡದೆ ದುಡಿಸಿಕೊಂಡಿದ್ದರು. ನಂತರ ತಿಂಗಳಿಗೆ 7 ಸಾವಿರ ರು.ನಂತೆ ವೇತನವನ್ನು ನೀಡುತ್ತಿದ್ದಾರೆ. ಆದರೇ ಕಾರ್ಮಿಕರಿಗೆ ಸರಿಯಾದ ವೇತನವನ್ನು ನೀಡಿಲ್ಲ ಹಾಗೂ ಯಾವುದೇ ಸೌಲಭ್ಯಗಳನ್ನೂ ಕಲ್ಪಿಸಿಲ್ಲ ಎಂದು ಆರೋಪಿಸಿದರು.
ಬೇಡಿಕೆಗಳು: ಕೆಲಸದಿಂದ ತೆಗೆದಿರುವ 20 ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಳ್ಳಬೇಕು, ಕಾರ್ಖಾನೆಯಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಬೇಕು, ಜೊತೆಗೆ ಕೆಲಸಗಾರರಿಗೆ ಭದ್ರತೆ ಕಲ್ಪಿಸಬೇಕು. ಈ ಎಲ್ಲ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಮುರದಲ್ಲಿ ಕಾರ್ಮಿಕರಾದ ಪುನೀತ್, ಪ್ರದೀಪ್, ದಿಲೀಪ್ ಕುಮಾರ್, ಅಶ್ವತ್, ಮಧು, ಮಿಥುನ್, ಪ್ರಕಾಶ್, ಮಧುಸೂದನ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

