ಸ್ಮಶಾನ ಭೂಮಿಯಲ್ಲಿ ಕಸ ಸಂಗ್ರಹ ನಿಲ್ಲಿಸಿ
ಕನ್ನಡಪ್ರಭ ವಾರ್ತೆ, ಸಕಲೇಶಪುರ. ಜು 9
ಪಟ್ಟಣದ ಜನನಿಬಿಡ ಪ್ರದೇಶದಲ್ಲಿ ಕಸವಿಲೇವರಿ ಮಾಡುತ್ತಿರುವುದನ್ನು ನಿಲ್ಲಿಸುವಂತೆ ಸಾರ್ವಜನಿಕರು ಉಪವಿಭಾಗ ಅಧಿಕಾರಿಗೆ ಒತ್ತಾಯಿಸಿದ ಘಟನೆ ಬುಧವಾರ ನಡೆಯಿತು.
ಘನತ್ಯಾಜ್ಯ ವಸ್ತು ನಿರ್ಮೂಲನಾ ಹೋರಾಟ ಸಮಿತಿ ಮತ್ತು ನಾನಾ ಪ್ರಗತಿಪರ ಸಂಘಟನೆಗಳ ಮುಖಂಡರು ಉಪವಿಭಾಗದಿಕಾರಿ ಮಧುಕೇಶ್ವರ್ಗೆ ಮನವಿ ಪತ್ರ ನೀಡಿ ಪಟ್ಟಣದ ಅಜಾದ್ ರಸ್ತೆಯ ಸ್ಮಶಾನ ಭೂಮಿಯಲ್ಲಿ ಕಳೆದ ನಾಲ್ಕು ವರ್ಷದಿಂದ ಕಸ ಸಂಗ್ರಹ ಮಾಡಲಾಗುತ್ತಿರುವುದರಿಂದ ಇಲ್ಲಿನ ನಿವಾಸಿಗಳು ನಿತ್ಯ ನರಕ ಅನುಭವಿಸುವಂತಾಗಿದೆ. ಅಲ್ಲದೆ ಕಸದ ನೀರು ಹೇಮಾವತಿ ಮಡಿಲು ಸೇರಿ ಕುಡಿಯುವ ನೀರು ಕಲುಷಿತಗೊಳ್ಳುತ್ತಿದೆ ಎಂದರು.
ನಿವೇಶನವಾಗಿ ಪರಿವರ್ತನೆ: ಘನತ್ಯಾಜ್ಯ ವಿಲೇವರಿಗಾಗಿ ಮಳಲಿ ಗ್ರಾಮದಲ್ಲಿ ಜಾಗ ಗುರುತಿಸಲಾಗಿದ್ದರು ವಿನಾ ಕಾರಣ ಇದೆ ಪ್ರದೇಶದಲ್ಲಿ ಕಸವಿಲೇವಾರಿ ಮಾಡಲಾಗುತ್ತಿದೆ. ಇದರಿಂದಾಗಿ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ಬಂದವರು ತೊಂದರೆ ಅನುಭವಿಸುವಂತಾಗಿದೆ. ಮತ್ತೋಂದೆಡೆ ಕೃಷಿ ಭೂಮಿಗೆ ಮಣ್ಣು ತುಂಬಿಸಿ, ನಿವೇಶನವನ್ನಾಗಿ ಮಾಡಲು ಸ್ಮಶಾನದ ಮಾರ್ಗ ಬಳಸಿರುವದರಿಂದ ರಸ್ತೆ ಹದಗೆಟ್ಟಿದೆ ಎಂದು ದೂರಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಲಲಿತಮ್ಮ , ತಾಜುನ್ನಿಸ, ಸ್ಥಳಿಯ ಅಜೀಜ್, ಪುರಸಭೆ ಮಾಜಿ ಸದಸ್ಯ ಪ್ರಕಾಶ್, ರಮ, ಕಿರಣ್ ಕುಮಾರ್, ಮಂಜುನಾಥ್, ಸತ್ಯನಾರಯಣ ಗುಪ್ತ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

