ಚಾಲನಾ ತರಬೇತಿ
ಹಾಸನ: ಪರಿಶಿಷ್ಟ ಜಾತಿ ಉಪಯೋಜನೆ ಅಡಿ ಪರಿಶಿಷ್ಟ ಜಾತಿಯ 2 ಅಭ್ಯಔಜ್ಗಿಗಳಿಗೆ ಆಟೋರಿಕ್ಷಾ, 5 ಅಭ್ಯರ್ಥಿಗಳಿಗೆ ಲಘು ಮೋಟಾರು ವಾಹನ ಹಾಗೂ ಒಬ್ಬ ಅಭ್ಯರ್ಥಿಗೆ ಭಾರಿ ಸಾರಿಗೆ ವಾಹನ ಚಾಲನಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಕಲೇಶಪುರ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ವ್ಯಾಪ್ತಿಯಲ್ಲಿ ಬರುವ ಸಕಲೇಶಪುರ, ಬೇಲೂರು ಮತ್ತು ಆಲೂರು ತಾಲೂಕುಗಳ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಸಂಬಂಧಪಟ್ಟ ಅರ್ಜಿ ಹಾಗೂ ಪೂರಕ ದಾಖಲಾತಿಗಳೊಂದಿಗೆ ಕಚೇರಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಅರ್ಜಿಗಳನ್ನು ಜು. 30ರೊಳಗೆ ಕಚೇರಿ ವೇಳೆಯಲ್ಲಿ ಪಡೆದು ಸಲ್ಲಿಸಬಹುದು. ತರಬೇತಿಗಾಗಿ ಅಭ್ಯರ್ಥಿಗಳ ಆಯ್ಕೆ ಕಾರ್ಯವನ್ನು ಆಗಸ್ಟ್ 12ರಂದು ಬೆಳಗ್ಗೆ 11.30ಕ್ಕೆ ನಡೆಸಲಾಗುವುದು. ಆದ್ದರಿಂದ ಅರ್ಜಿ ನೋಂದಾಯಿಸಿದ ಎಲ್ಲಾ ಅಭ್ಯರ್ಥಿಗಳು ತಪ್ಪದೇ ಅಂದು ಹಾಜರಾಗುವುದು. ಹೆಚ್ಚಿನ ಮಾಹಿತಿಗೆ ಸಕಲೇಶಪುರ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಚೇರಿ ಸಂಪರ್ಕಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

