ಅರಣ್ಯ ರಸ್ತೆಗಳಲ್ಲಿ ವನ್ಯ ಪ್ರಾಣಿಗಳ ರಕ್ಷಣೆ
ಹಾಸನ: ರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ, ಮೈಸೂರು-ಮಾನಂತವಾಡಿ ರಸ್ತೆ, ಹುಣಸೂರು ನಾಗರಹೊಳೆ-ಕುಟ್ಟಿ ರಸ್ತೆ, ಕಾವೇರಿ ವನ್ಯಧಾಮ, ಭೂವಳ್ಳಿ-ಮುತ್ತತ್ತಿ ತಾಳವಾಡಿ ರಸ್ತೆ ಮತ್ತು ಪಾಲರ್ ಹೊಗನೇಕಲ್ ಗೋಪಿನಾಥಂ ರಸ್ತೆಗಳನ್ನು ಅಪಘಾತ ವಲಯಗಳೆಂದು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅಪಘಾತ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ರಕ್ಷಿತಾರಣ್ಯಗಳಲ್ಲಿ ಹಾದು ಹೋಗುವ ರಸ್ತೆಗಳಲ್ಲಿ ಅಪಘಾತವಾಗುವ ಸಂಭವವಿರುತ್ತದೆ. ವನ್ಯಪ್ರಾಣಿಗಳು ಮತ್ತು ವಾಹನಗಳ ನಡುವೆ ಅಪಘಾತ ತಪ್ಪಿಸಲು ಅಗತ್ಯವಿರುವ ಕಡೆ ರಾತ್ರಿ ಸಂಚಾರ ನಿಷೇಧಿಸುವುದು, ರಸ್ತೆ ಉಬ್ಬುಗಳನ್ನು ನಿರ್ಮಾಣ ಮಾಡುವುದು, ಸೂಚನಾ ಫಲಕಗಳನ್ನು ಅಳವಡಿಸುವಂತಹ ಮಾರ್ಗಸೂಚಿಗಳನ್ವಯ ಕ್ರಮ ಕ್ಯಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

