ಹಾಸನ

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿ

Published On :

ಹಾಸನ: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿ ಸಮಯ ಪ್ರಜ್ಞೆ ಮೂಡಿಸುವತ್ತ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಶಿಕ್ಷಣ ಅಗತ್ಯ ಎಂದು ಹಾಸನ ಕ್ಷೇತ್ರ ಶಿಕ್ಷಣಧಿಕಾರಿ ರವಿಕುಮಾರ್ ಹೇಳಿದರು.
ನಗರದ ಭಾರತ್ ಸ್ಕೌಟ್ಸ್ ಗೈಡ್ಸ್ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ಕೌಟ್ ಮಾಸ್ಟರ್ಸ್ ಮತ್ತು ಗೈಡ್ ಕ್ಯಾಪ್ಟನ್ ಮೂಲ ತರಬೇತಿ ಶಿಬಿರದ ಸಮಾರಂಭದಲ್ಲಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಸಮಾಜಮುಖಿಯಾಗಿ ರೂಪುಗೊಳಿಸಲು ಗಾಂಧಿ, ಅಂಬೇಡ್ಕರ್ ಅವರಂಥ ಆದರ್ಶಗಳನ್ನು ಮೈಗೂಡಿಸಬೇಕು. ಆ ಸ್ಥಾನವನ್ನು ಶಿಕ್ಷಕರು ಪಡೆದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸೇವ ಮನೋಭಾವನ್ನು ಹೆಚ್ಚಿಸಬೇಕಿದೆ ಎಂದರು.
ಡಾ.ವೈ.ಎಸ್.ವಿರಭದ್ರಪ್ಪ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಪಡೆದ ಪ್ರತಿ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳನ್ನು ತೆರೆದು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ ಬೆಳೆಸಿಕೊಳ್ಳುವಂತೆ ಪ್ರೇರೆಪಿಸಬೇಕು ಎಂದರು. ಇದೆ ಸಂದರ್ಭದಲ್ಲಿ ಕ್ಯಾಂಪ್ ಲೀಡರ್ಗಳಾದ ಎಲ್ಒಸಿ ಎಂ.ಎಸ್.ಪ್ರಕಾಶ್ ಹಾಗೂ ಎಲ್ಒಸಿ ಕಾಮೇಶ್ವರಿ ಇದ್ದರು. ವೈ.ಡಿ. ಪದ್ಮ ಪ್ರಮಾಣ ಪತ್ರ ವಿತರಿಸಿದರು, ಗೈಡ್ ಡಿಟಿಸಿ ಕಾಂಚನ ಮಾಲಾ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಮುತ್ತೇಗೌಡ ವಂದಿಸಿದರು. ಲೀಲಾ ಮಹೇಶ್ ನಿರೂಪಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.