ಹಾಸನ

ಆಲೂಗಡ್ಡೆ ಬೆಳೆಗೆ ಔಷಧೋಪಚಾರ: ಸಲಹೆ

Published On :

ಹಾಸನ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು ತುಂತುರು ಮಳೆ ಇರುವುದರಿಂದ ಹಾಗೂ ಆಲೂಗೆಡ್ಡೆ ಬೆಳೆಯು ಅಂದಾಜು 45 ದಿನಗಳ  ಬೆಳೆಯಾಗಿರುವುದರಿಂದ ಈ ಹಂತದಲ್ಲಿ ಅಂಗಮಾರಿ ರೋಗ ಬರುವ ಸಾಧ್ಯತೆಗಳು ಇರುತ್ತವೆ.  ಈಗಾಗಲೇ ಹಲವು ರೈತರು ಮುಂಜಾಗ್ರತಾ ಕ್ರಮವಾಗಿ ರೈತರು ಶಿಲೀಂಧ್ರನಾಶಕಗಳನ್ನು ಆಲೂಗಡ್ಡೆ ಬೆಳೆಗೆ ಸಿಂಪಡನೆ ಮಾಡುವುದು ಅಗತ್ಯವಾಗಿದೆ.
ಶೇ.50 ರ ಸಹಾಯಧನ: ತೋಟಗಾರಿಕೆ ಇಲಾಖೆ ವತಿಯಿಂದ ಆಲೂಗೆಡ್ಡೆ ವಿಶೇಷ ಪ್ಯಾಕೇಜ್ ಯೋಜನೆಯಡಿ ಆಲೂಗೆಡ್ಡೆ ಬೆಳೆಗಾರರಿಗೆ ವಿವಿಧ ಸಸ್ಯ ಸಂರಕ್ಷಣಾ ಔಷಧಿಗಳನ್ನು ಶೇ.50 ರ ಸಹಾಯಧನದಲ್ಲಿ ಆಯಾ ತಾಲೂಕಿನಲ್ಲೇ ವಿತರಿಸಲಾಗುತ್ತಿದ್ದು, ಈಗಾಗಲೇ ಈ ಸೌಲಭ್ಯ ಪಡೆದುಕೊಳ್ಳದ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯ್ತಿ ತೋಟಗಾರಿಕೆ ಉಪನಿರ್ದೇಶಕರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.