ಹೊಳೆನರಸೀಪುರ: ಕರುನಾಡು ವಿವಿಧ ಸಂಪತ್ತನನ್ನು ಪಡೆದ ನಾಡಾಗಿದ್ದು, ಇವುಗಳಲ್ಲಿ ಜಾನಪದ ಸಂಪತ್ತು ಕೂಡ ಒಂದು. ಈ ದೇಶದ ಕಲೆ, ಸಾಹಿತ್ಯ, ಸಂಗೀತ, ನೃತ್ಯಗಳು ನಾಡಿನ ದಿಕ್ಕನ್ನು ತೋರಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ.ಎಂ.ಬಿ. ಇರ್ಷಾದ್ ನುಡಿದರು. ತಾಲೂಕು ಜಾನಪದ ಕಲಾ ಪರಿಷತ್ ಪಟ್ಟಣದ ಪ್ರಿಯದರ್ಶಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಜಾನಪದ ಗೀತ ಗಾಯನ ಸ್ಪರ್ಧೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಅಳವಡಿಸಿಕೊಳ್ಳಿ: ಪ್ರಸ್ತುತ ಸಮಾಜದಲ್ಲಿ ಇಂತಹ ಜಾನಪದ ಕಲೆಗಳು ಮರೆಯಾಗುತ್ತಿರುವುದರಿಂದ ಇದನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅವಶ್ಯವೆಂದು ಅಭಿಪ್ರಾಯಪಟ್ಟರಲ್ಲದೇ, ಜಾನಪದ ಕಲೆಯನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಆಳವಡಿಸಿಕೊಂಡು ಕಲೆಯ ಉಳಿವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಪರಿಷತ್ತಿನ ಮಹಿಳಾ ಘಟಕದ ಕಾರ್ಯದರ್ಶಿ ಕಾವ್ಯಶ್ರೀ ಜಾನಪದ ಗೀತೆಗಳನ್ನು ಹಾಡುವ ಮೂಲಕ ಸರ್ವ ಕಾಲಕ್ಕು ಅವಶ್ಯ ಎಂಬುದಾಗಿ ತಿಳಿಸಿದರು.