ಹಾಸನ

ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ

Published On :

ಅರಸೀಕೆರೆ: ಗುರು ಪೌರ್ಣಮಿಯ ಅಂಗವಾಗಿ ತಾಲೂಕಿನ ಇತಿಹಾಸ ಪ್ರಸಿದ್ಧ ಯಾದಾಪುರ ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಕ್ಷೇತ್ರಕ್ಕೆ ಭಾನುವಾರ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ಶ್ರೀ ಸ್ವಾಮಿಯವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು. ಮಧ್ಯರಾತ್ರಿ 1ರಿಂದಲೇ ಸಾವಿರಾರು ಭಕ್ತಾಧಿಗಳು ತಂಡೋಪತಂಡವಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ  ವಿಶೇಷ ಪೂಜೆ, ಪುನಸ್ಕಾರ, ಕೈಂಕರ್ಯಗಳನ್ನು ಭಕ್ತಿಭಾವದಿಂದ ನೆರವೇರಿಸಿದರು. ಬೆಟ್ಟದ ಮೇಲಿರುವ ಶ್ರೀ ಜೇನುಕಲಲ್ಸಿದ್ದೇಶ್ವರರ ಪಾದಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ರುದ್ರಾಭೀಷೇಕ, ಸಹಸ್ರ ಬಿಲ್ವಾರ್ಚನೆ, ಕರ್ಪೂರದ ಸೇವೆ, ಮಹಾಮಂಗಳಾರತಿ ನಡೆಸಲಾಯಿತು.
ಪ್ರಸಾದ ವಿನಿಯೋಗ: ಬೆಟ್ಟದ ಕೆಳಗಿರುವ ಬಸವೇಶ್ವರ ದೇವಾಲಯದಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತು ಸ್ವಾಮಿಯವರಿಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಬಂದ ಭಕ್ತರಿಗೆ ಪ್ರತಿದಿನದಂತೆ ಪ್ರಸಾದ ವಿನಿಯೋಗ ಕಾಟೀಕೆರೆ, ಹಾಗೂ ಸಂಕೋಡನಹಳ್ಳಿ ಗ್ರಾಮದ ಭಕ್ತಾಧಿಗಳು ಏರ್ಪಡಿಸಿದ್ದರು. ಗುರು ಪೌರ್ಣಮಿ ಅಂಗವಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಾಧಿಗಳ ಅನುಕೂಲಕ್ಕೆ ಸಾರಿಗೆ ಸಂಸ್ಥೆ ವಿಶೇಷ ಬಸ್ಗಳ  ಸೌಲಭ್ಯ ಒದಗಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.