ನಾಯಿ ದಾಳಿ, ಬಾಲಕಿಗೆ ತೀವ್ರ ಗಾಯ
ಹಾಸನ: ಎರಡು ವರ್ಷದ ಬಾಲಕಿ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸುವ ಘಟನೆ ಶನಿವಾರ ನಡೆದಿದೆ. ನಗರದ ಶ್ರೀನಗರ ನಿವಾಸಿ ಯೋಗೀಶ್ ಎಂಬವರ ಪುತ್ರಿ ಸಂದ್ಯಾಶ್ರೀ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿ. ಸಂದ್ಯಾ ಎಂದಿನಂತೆ ಮನೆ ಮುಂದೆ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಬೀದಿ ನಾಯಿಯೊಂದು ಬಾಲಕಿಯ ಮೇಲೆರಗಿ ಕಚ್ಚಿ ಗಾಯಗೊಳಿಸಿದೆ. ಬಾಲಕಿಯ ಭುಜ, ಬೆನ್ನಿಗೆ ತೀವ್ರ ಗಾಯವಾಗಿದ್ದು ಆಕೆಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮನುಷ್ಯನ ಮೇಲೆ ದಾಳಿ ನಡೆಸುತ್ತಿದ್ದರೂ ನಗರಸಭೆ ಕೈಕಟ್ಟಿ ಕುಳಿತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಬೀದಿನಾಯಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಫೆಲೋಶಿಪ್ಗೆ ಅರ್ಜಿ ಆಹ್ವಾನ
ಹಾಸನ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2014-15ನೇ ಸಾಲಿನಲ್ಲಿ 5 ಜನರಿಗೆ ತಲಾ 1ಲಕ್ಷರು. ಫೆಲೋಶಿಪ್ ನೀಡಲು ಉದ್ದೇಶಿಸಿದೆ. ಇದಕ್ಕಾಗಿ ಈ ಕೆಳಕಂಡ ಅರ್ಹ ಅಭ್ಯರ್ಥಿಗಳಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಪಡೆದವರು ಅರ್ಜಿ ಹಾಕಬಹುದು (ಪ್ರಮಾಣಪತ್ರದ ದೃಢೀಕೃತ ಪ್ರತಿ ಲಗತ್ತಿಸಬೇಕು), ನಿಗದಿತ ಅರ್ಜಿಯನ್ನು ಸ್ವವಿಳಾಸವಿರುವ ಅಂಚೆ ಲಕೋಟೆ ಇಟ್ಟು ಅಕಾಡೆಮಿಯಿಂದ ಪಡೆಯಬಹುದು. 20-50 ವಯೋವಾನದ ಒಳಗಿನವರು ಅರ್ಜಿ ಹಾಕಬಹುದು. ಅರ್ಜಿಯನ್ನು ಸಾರಲೇಖದೊಂದಿಗೆ ಸಲ್ಲಿಸಲು ಆಗಸ್ಟ್ 15 ಕಡೇ ದಿನ. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯನ್ನು ಸಂಪರ್ಕಿಸ. ದೂ. 080-22211730, 22106460 ಇಲ್ಲಿ ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

