ಹಾಸನ

ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ

Published On :

ಕನ್ನಡಪ್ರಭ ವಾರ್ತೆ. ಹಾಸನ. ಜು 15
ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ನಲ್ಲಿ ದಿನನಿತ್ಯದ ಪದಾರ್ಥಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್‌ಗೆ ಮನವಿ ನೀಡಿದರು.
ಜನಪರ ಕಾರ್ಯಕ್ರಮ: ಎನ್‌ಡಿಎ ಸರ್ಕಾರ ಮೊದಲ ಬಾರಿಗೆ ಮಂಡಿಸಿದ ಚೊಚ್ಚಲ ಆಯವ್ಯಯದಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೆಟ್ಲಿ ಅವರು ಯಾವುದೇ ರೀತಿಯ ಜನಪರ ಕಾರ್ಯಕ್ರಮಗಳನ್ನು ನೀಡಿಲ್ಲ. ಅದರಲ್ಲಿ ಪ್ರಮುಖವಾಗಿ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.  ದಿನನಿತ್ಯದ ಪದಾರ್ಥಗಳಾದ ಆಹಾರ ಪದಾರ್ಥಗಳು, ಗ್ಯಾಸ್, ಪೆಟ್ರೋಲ್, ಡಿಸೇಲ್ ಬೆಲೆಗಳಲ್ಲಿ ಕಡಿವಾಣ ಮಾಡಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿರ್ಲಕ್ಷ್ಯ: ಸರ್ಕಾರ ತನ್ನ ಆಯವ್ಯಯದಲ್ಲಿ ಯುವಕರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ನಿರುದ್ಯೋಗ ನಿವಾರಣೆಗೆ ಯಾವುದೇ ರೀತಿಯ ಒತ್ತನ್ನು ನೀಡಿಲ್ಲ. ಯಾವುದೇ ಹೊಸ ಯೋಜನೆಗಳು ಕಂಡ ಬಂದಿಲ್ಲ. ಒಟ್ಟಾರೆಯಾಗಿ ಬಜೆಟ್ ಸಾಮಾಜಿಕ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಹೆಚ್ಚಿನದಾಗಿ ವಾಣಿಜ್ಯೋದ್ಯಮಗಳಿಗೆ ಅನುಕೂಲವಾಗುವಂತಹ ತೆರಿಗೆ ಕ್ರಮಗಳನ್ನು ಘೋಷಿಸಿದ್ದಾರೆ ಎಂದು ಆರೋಪಿಸಿದರು.
ಆ ಆಯವ್ಯಯವು ಹೆಚ್ಚು ಬಂಡವಾಳ ಶಾಹಿಗಳಿಗೆ ಅನುಕೂಲವಾಗಿದೆ. ಜನ ವಿರೋಧಿ ಬಜೆಟ್ ಆಗಿರುವ ಇದು ದೇಶದ ಜನ ಸಾಮಾನ್ಯರಿಗೆ ಅನುಕೂಲವಾಗದೆ ಹೆಚ್ಚಾಗಿ ಅನಾನುಕೂಲವಾಗಿದೆ. ವಾಣಿಜ್ಯೋದ್ಯಮಗಳಿಗೆ ಹೆಚ್ಚಿನ ಒತ್ತನ್ನು ನೀಡಿ, ಸಾಮಾನ್ಯ ಜನತೆ ಹಿತಾಸಕ್ತಿ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣಗೌಡ, ಬಿ.ಎಸ್. ನವೀನ್ ಕುಮಾರ್, ಮಹಂತೇಶ್, ಮಂಜುನಾಥ್, ರಾಜು, ಕುಮಾರ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.