ಹಾಸನ

ಗೋವುಗಳ ಅಕ್ರಮ ಸಾಗಣೆ: ಆರೋಪಿಗಳು ಸೆರೆ

Published On :

ಬೇಲೂರು: ಅಕ್ರಮವಾಗಿ ಗೋವುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದ ಆರೋಪದ ಮೇಲೆ ನಾಲ್ವರನ್ನು  ಪೊಲೀಸರು ಬಂಧಿಸಿರುವ ಘಟನೆ  ಸೋಮವಾರ ರಾತ್ರಿ ನಡೆದಿದೆ.
ಬೇಲೂರು ತಾಲೂಕಿನ ಎನ್. ನಿಡಗೋಡು ಗ್ರಾಮದ ಸಂತೋಷ, ಚಂದನ್, ರಘು, ಮಜಾದ್ ಇವರನ್ನು ಬೇಲೂರು ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪಟ್ಟಣದ ಮುಖ್ಯರಸ್ತೆಯ ಯಗಚಿ ಸೇತುವೆ ಸಮೀಪದ ಮೀನುಮಾರುಕಟ್ಟೆ ಸಮೀಪ ಸಂಜೆ 6 ಗಂಟೆಗೆ ಆಪೆ ಮತ್ತು ಟಾಟಾ ಏಸ್ ವಾಹನದಲ್ಲಿ 11ಗೋವುಗಳನ್ನು ಸಾಗಿಸುತ್ತಿದ್ದಾಗ, ಸ್ಥಳಕ್ಕೆ ಆಗಮಿಸಿದ ಎಸ್‌ಐ ಆನಂದ ಕುಮಾರ್ ಹಾಗೂ ಸಿಬ್ಬಂದಿ ವಾಹನ ಸಹಿತ ಆರೋಪಿಗಳನ್ನ ವಶಕ್ಕೆ ತೆಗೆದುಕೊಂಡು ಕೇಸು ದಾಖಲಿಸಿದ್ದಾರೆ.
ವಾಹನಗಳಲ್ಲಿದ್ದ ಗೋವುಗಳನ್ನು ಗೋ ಶಾಲೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಹನದಲ್ಲಿ ಸಾಗಿಸುತ್ತಿದ್ದ ಜಾನುವಾರುಗಳು.
ಹಾಸನ: ಕಸಾಯಿಖಾನೆಗೆ ಸಾಗಿಸುತ್ತಿದ್ದ 9 ಕರುಗಳು ಹಾಗೂ ಒಂದು ಎಮ್ಮೆಯನ್ನು ಬಜರಂಗದಳ ಕಾರ್ಯಕರ್ತರು ತಡೆದು ಇಬ್ಬರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಗಳವಾರ ನಡೆದಿದೆ. ಚಾಲಕ ತಬ್ರೇಸ್ ಮತ್ತು ಲೋಹಿತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
 ನಗರದ ಸಂತೆ ಮೈದಾನದಿಂದ ಕರು ಹಾಗೂ ಎಮ್ಮೆಯನ್ನು ಅಫೆ ವಾಹನದಲ್ಲಿ ಗಂಡಸಿಗೆ ಕೊಂಡುಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಹೇಮಾವತಿ ಆಸ್ಪತ್ರೆ ಬಳಿ ಅನುಮಾನಗೊಂಡ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿದಾಗ ಆಪೆ ವಾಹನ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ನಂತರ ಅಡ್ಡಗಟ್ಟಿ ನಿಲ್ಲಿಸಿದಾಗ ಕರು ಮತ್ತು ಎಮ್ಮೆಯನ್ನು ಕಸಾಯಿಖಾನೆಗೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದಲ್ಲಿ ಮಂಗಳವಾರ ನಡೆಯುವ ಸಂತೆಯಲ್ಲಿ ದನ-ಕರುಗಳನ್ನು ಕಸಾಯಿಖಾನೆಗೆ ವ್ಯಾಪಕವಾಗಿ ಸಾಗಿಸಲಾಗುತ್ತಿದೆ. ಈವರೆಗೂ ಇದರ ವಿರುದ್ಧ ಯಾವ ಕ್ರಮವನ್ನು ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.