ಖಾತ್ರಿ ಯೋಜನೆ ಸಾಮಾಜಿಕ ಪರಿಶೋಧನೆ
ಜಾವಗಲ್: ಗ್ರಾಮ ಪಂಚಾಯ್ತಿಯ 2013ರ ಅ.1ರಿಂದ 2014ರ ಮಾ. 31ರ ಅವಧಿಯಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಗ್ರಾಪಂ ನೋಡೆಲ್ ಅಧಿಕಾರಿ ಸಾಮಾಜಿಕ ಅರಣ್ಯ ವಲಯಾಧಿಕಾರಿ ಸುಬ್ರಹ್ಮಣ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ವಲಯಾಧಿಕಾರಿ ಸುಬ್ರಹ್ಮಣ್ಯ ಮಾತನಾಡಿ, 6 ತಿಂಗಳ ಅವಧಿಯಲ್ಲಿ ಯೋಜನೆಯಡಿ 32ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು.ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. 32 ಕಾಮಗಾರಿಗಳಲ್ಲಿ 13ಶೌಚಾಲಯಗಳ ಫಲಾನುಭವಿಗಳಿಗೆ ಸಹಾಯಧನ ನೀಡಿದ್ದು, ಒಟ್ಟು ಕೂಲಿ ವೆಚ್ಚ 15,73,656 ಹಾಗೂ ಸಾಮಗ್ರಿ ವೆಚ್ಚ 2,95,323 ಆಗಿವೆ ಎಂದರು. ತಾ.ಪಂ. ಸಂಪನ್ಮೂಲ ವ್ಯಕ್ತಿ ಎಂ.ಎಸ್. ಪಂಚಾಕ್ಷರಿ ಯೋಜನೆ ಸಾಮಾನ್ಯ ಮಾಹಿತಿಯನ್ನು ವಿವರಿಸಿದರು.
ಸಲಹೆ: ಕಾಮಗಾರಿ ವರದಿಯನ್ನು ಎಸ್.ಎನ್. ಜೈಗುರು ಮಂಡಿಸಿದರು. ಗ್ರಾಮಸ್ಥರಾದ ಜೆ.ಕೆ. ಚಿಕ್ಕಯ್ಯ, ತಿಮ್ಮೆಗೌಡ ಜೆ.ಜಿ ಮಾತನಾಡಿ, ಕಾಮಗಾರಿ ನಿರ್ವಹಣೆ ಬಗ್ಗೆ ಸೂಕ್ತ ಸಲಹೆ ನೀಡಿದರು. ಗ್ರಾಮಸಭೆ ಆರಂಭದಲ್ಲಿ ಗ್ರಾಮಸ್ಥರು ಗ್ರಾಮದ ಕುಂದುಕೊರತೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿ, ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಂದಾದಾಗ ಕಸಿವಿಸಿ ವಾತಾವರಣ ಸೃಷ್ಟಿಯಾಗಿತ್ತು. ಈ ಸಂದರ್ಭದಲ್ಲಿ ಪಿಡಿಒ ವಿರೂಪಾಕ್ಷಪ್ಪ ಮಾತನಾಡಿ, ಸತ್ಯಶೋಧನಾ ಗ್ರಾಮ ಸಭೆಯಲ್ಲಿ ಕುಂದುಕೊರತೆಗಳು ಮತ್ತು ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದು ಸ್ಪಷ್ಟಪಡಿಸಿದರು. ನಂತರ ಕಾರ್ಯಕ್ರಮ ಸುಗಮವಾಗಿ ನಡೆಯಿತು. ಗ್ರಾಪಂ ಅಧ್ಯಕ್ಷೆ ಕವಿತಮಂಜುನಾಥ್ ಉಪಾಧ್ಯಕ್ಷ ರಂಗಸ್ವಾಮಿ, ಸದಸ್ಯರು, ತಾಪಂ ಸದಸ್ಯ ಲಕ್ಷ್ಮೀ ರವಿಶಂಕರ್, ಮಲ್ಲೇಶಪ್ಪ ಹಾಗೂ ಗ್ರಾಮಸ್ಥರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

