ಹಾಸನ

ಇಬ್ಬರು ಕಳ್ಳರ ಸೆರೆ: ರು. 4.60 ಮೌಲ್ಯದ ಆಭರಣ ವಶ

Published On :

ಹಾಸನ: ಮನೆಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು  ಬಂಧಿಸಿರುವ  ದುದ್ದ ಠಾಣೆಯ ಪೊಲೀಸರು ಆರೋಪಿಗಳಿಂದ  4.60 ಲಕ್ಷ ರು. ಮೌಲ್ಯದ ಚಿನ್ನಾಭರಣವನ್ನು  ವಶಪಡಿಸಿಕೊಂಡಿರುವ  ಘಟನೆ ಇತ್ತೀಚೆಗೆ ನಡೆದಿದೆ.
 ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬ್ಯಾಡರಹಳ್ಳಿ ಗ್ರಾಮದ ಕರಿಯಪ್ಪ ಹಾಗೂ ಶಿವ ಎಂಬವರೇ ಬಂಧಿತ ಆರೋಪಿಗಳು. ಈ ಆರೋಪಿಗಳು ಹಾಸನ ಗ್ರಾಮಾಂತರ ಹಾಗೂ ದುದ್ದ ಠಾಣೆಗಳ ವ್ಯಾಪ್ತಿಗಳಲ್ಲಿ ನಡೆದಿದ್ದ ಹಗಲು ಮತ್ತು ರಾತ್ರಿ ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.
 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ರವಿ ಡಿ. ಚನ್ನಣ್ಣನವರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಜೆ.ಕೆ.ರಶ್ಮಿ, ಪೊಲೀಸ್ ಉಪಾಧೀಕ್ಷಕ ಎಚ್. ಪರಮೇಶ್ ಭೀಮಕ್ಕನವರ್ ಮಾರ್ಗದರ್ಶನದಲ್ಲಿ ಸಿಪಿಐ ಕೆ.ಎಂ. ವಸಂತ ಅವರ ನೇತೃತ್ವದಲ್ಲಿ ದುದ್ದ ಠಾಣೆ ಪಿಎಸ್‌ಐ ಲಕ್ಷ್ಮಣಗೌಡ ಹಾಗೂ ಸಿಬ್ಬಂದಿ ಮಂಜುನಾಥ, ಹರೀಶ, ಮಹಮ್ಮದ್, ಇಸ್ಮಾಯಿಲ್,  ಪಾಲಾಕ್ಷ, ಎಂ.ಎಂ.ದೇವರಾಜ, ಪುನೀತ್, ಜಗದೀಶ್, ಭಾನುಪ್ರಕಾಶ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು  ಬಂಧಿಸಲಾಗಿದೆ. ಆರೋಪಿಗಳಿಂದ ಐದು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು  4.60 ಲಕ್ಷ ಮೌಲ್ಯದ  170 ಗ್ರಾಂನ ಚಿನ್ನಾಭರಣಗಳನ್ನು  ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.