ಹಾಸನ

ಕಾಂಗ್ರೆಸ್‌ನಿಂದ ವೋಟ್ ಬ್ಯಾಂಕ್ ರಾಜಕಾರಣ

Published On :

ಕ.ಪ್ರ.ವಾರ್ತೆ ್ಣ ಅರಸೀಕೆರೆ ್ಣ ಜು. 18
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನತೆಗೆ ಸುಳ್ಳು ಹೇಳಿ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು ಹಾಲಿಗೆ ಹೆಚ್ಚುವರಿ 2 ರು. ನೀಡುವಲ್ಲಿ ಮತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡಿ ಜನರಲ್ಲಿ ಜಾತಿಯ ವಿಷಬೀಜವನ್ನು ಬಿತ್ತುತ್ತಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕಿನ ಸುಕ್ಷೇತ್ರ ಯಾದಾಪುರ ಜೇನುಕಲ್ ಸಿದ್ದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಜು.17, 18ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಬಿಜೆಪಿ ಪದಾಧಿಕಾರಿಗಳ ಅಭ್ಯಾಸವರ್ಗದಲ್ಲಿ ಮಾತನಾಡಿದರು.
ತಾರತಮ್ಯ ನೀತಿ: 130 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ಪ.ಜಾತಿ, ಪ.ಪಂಗಡದ ಸದಸ್ಯರು ಹಾಲು ಉತ್ಪಾದಕರ ಸಂಘಗಳಿಗೆ ನೀಡುವ ಹಾಲಿಗೆ ಹೆಚ್ಚುವರಿಯಾಗಿ 2 ರು. ನೀಡುತ್ತಿರುವುದು, ಹಿಂದುಳಿದ ವರ್ಗಗಳ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವಲ್ಲಿ ಮತ್ತು ಸಾಲಮನ್ನಾ ಯೋಜನೆಯಲ್ಲಿಯೂ ಜಾತಿ ತಾರತಮ್ಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಹಿಂದೆ ಆಡಳಿತ ನಡೆಸಿದ ಮಾಜಿ ಸಿ.ಎಂ.ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್ ಆಡಳಿತ ಅವಧಿಯಲ್ಲಿ ಪಕ್ಷಾತೀತವಾಗಿ, ಜಾತ್ಯತೀತವಾಗಿ ಭಾಗ್ಯಲಕ್ಷ್ಮಿ, ಕ್ಷೀರಭಾಗ್ಯ, ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ ಸಾಲ,  ಎಲ್ಲ ಯೋಜನೆಗಳನ್ನು ಎಲ್ಲ ವರ್ಗದ ಜನರಿಗೆ ಒದಗಿಸುವ ಮೂಲಕ ಜನಪರ ಕಾರ್ಯಗಳನ್ನು ಮಾಡಿದ್ದರು ಎಂದರು.
ವಿಧಾನಪರಿಷತ್ ಮಾಜಿ ಸದಸ್ಯ ಮೇದಪ್ಪ, ಮಾಜಿ ಶಾಸಕ ಬಸವರಾಜ್, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿ.ಬಿಜೆಪಿ ಅಧ್ಯಕ್ಷ ರೇಣುಕುಮಾರ್, ಜಿಲ್ಲಾ ವಕ್ತಾರ ಎನ್.ಡಿ. ಪ್ರಸಾದ್, ಕಾರ್ಯದರ್ಶಿ ಗಂಜೀಗೆರೆ ಬಸವರಾಜ್, ಮುಖಂಡ ನವಿಲೆ ಅಣ್ಣಪ್ಪ, ತಾ.ಬಿಜೆಪಿ ಅಧ್ಯಕ್ಷ ಹರಳಕಟ್ಟ ರಮೇಶ್, ವೈ.ಕೆ.ದೇವರಾಜ್, ಮನೋಜ್, ಚೇತನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.