ಜನಸಂಖ್ಯೆ ನಿಯಂತ್ರಿಸಲು ಅರಿವು ಮೂಡಿಸಿ: ಡಿಸಿ
ಕ.ಪ್ರ.ವಾರ್ತೆ ್ಣ ಹಾಸನ ್ಣ ಜು. 18
ಜನ ಸಂಖ್ಯಾ ಹೆಚ್ಚಳದಿಂದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಕುಟುಂಬ, ಸಮಾಜ, ರಾಜ್ಯ, ದೇಶದ ಮೇಲೆ ಪರಿಣಾಮ ಬೀರುತ್ತದೆ ಈ ನಿಟ್ಟಿನಲ್ಲಿ ಜನ ಸಂಖ್ಯಾ ನಿಯಂತ್ರಣಕ್ಕಾಗಿ ಕುಟುಂಬ ಯೋಜನೆ ಅಳವಡಿಸಿಕೊಳ್ಳುವ ಕುರಿತು ಜನತೆಯಲ್ಲಿ ಅರಿವು ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲಕೃಷ್ಣ ಸಲಹೆ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ವಿಶ್ವ ಜನ ಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಸಮಾರಂಭವನ್ನು ಏರ್ಪಡಿಸುವ ಕುರಿತು ಜರುಗಿದ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಾಥಾ ಕಾರ್ಯಕ್ರಮ: ಜಿಲ್ಲಾ ಮಟ್ಟದ ಸಮಾರಂಭವನ್ನು ಜು. 26 ರಂದು ನಗರದ ಜೀವನಧಾರ ಸಂತ್ವನ ಸೇವಾ ಕೇಂದ್ರದಲ್ಲಿ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಅಂದು ಬೆಳಗ್ಗೆ 9 ಕ್ಕೆ ನಗರದ ವಾಣಿವಿಲಾಸ ಶಾಲೆ ಬಳಿಯಿಂದ ಏರ್ಪಡಿಸಿರುವ ಜಾಥಾ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಆರೋಗ್ಯ ಸಹಾಯಕಿಯರು ಪಾಲ್ಗೋಳಲು ಕ್ರಮವಹಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜೀವನಧಾರ ಸಾಂತ್ವನ ಸೇವಾ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಸಮಾರಂಭಕ್ಕೆ ಶಿಷ್ಟಾಚಾರದಂತೆ ಎಲ್ಲಾ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಂತೆ ತಿಳಿಸಿದರು. ಒಂದೇ ಹೆಣ್ಣು ಮಗುವಿದ್ದು ವ್ಯಾಸೆಕ್ಟಮಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರುವ ಬಿಪಿಎಲ್ ಕುಟುಂಬದವರನ್ನು ತಾಲೂಕುವಾರು ಗುರುತಿಸಿ ಸಮಾರಂಭದಲ್ಲಿ ಸನ್ಮಾನಿಸಲು ಕ್ರವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪೊಲೀಸ್ ಇಲಾಖೆ ವೃತ್ತ ನಿರೀಕ್ಷಕ ಸಂಜೀವೆ ಗೌಡ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕರಾದ ಹೆಚ್.ಸಿ. ಚಿದಾನಂದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಡಾ.ಹೇಮಲತ, ಡಾ.ಜನಾರ್ದನ್, ಡಾ.ರಾಜಗೋಪಾಲ್, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಶಬ್ಬಿರ್ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

