ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹಾಸನ, ಜು. 18
ಗೋವಾದಲ್ಲಿ ಕನ್ನಡಿಗರನ್ನು ತೆರವು ಗೊಳಿಸುವುದನ್ನು ಖಂಡಿಸಿ ಕರವೇ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಕಾರರು ಎನ್.ಆರ್. ವೃತ್ತಕ್ಕೆ ತೆರಳಿ ಕೆಲ ಸಮಯ ಮಾನವ ಸರಪಳಿ ರಚಿಸಿ ನಂತರ ಗೋವಾ ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
76 ಕುಟುಂಬ ಬೀದಿಪಾಲು: ಗೋವಾ ಕಡಲ ತೀರದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿರುವ ಕನ್ನಡಿಗರ ಮನೆ ತೆರವುಗೊಳಿಸಿ ಅವರುಗಳನ್ನು ಬೀದಿಗೆ ತರಲಾಗಿದೆ. ಉದ್ಯೋಗಕ್ಕಾಗಿ ಕಳೆದ 30 ವರ್ಷಗಳಿಂದ ಈ ಭಾಗದಲ್ಲಿಯೇ ಶಾಶ್ವತವಾಗಿ ವಾಸವಾಗಿದ್ದಾರೆ. ಒಟ್ಟು 76 ಕುಟುಂಬದಲ್ಲಿ 300ಕ್ಕೂ ಹೆಚ್ಚು ಕನ್ನಡಿಗ ಕೂಲಿ ಕಾರ್ಮಿಕರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ ಎಂದು ದೂರಿದರು. ಬಹುತೇಕ ಮನೆಗಳಿಗೆ ವಿದ್ಯುತ್ ಸಂಪರ್ಕ, ಮನೆ ನಂಬರ್ ಕೂಡ ಇದ್ದು, ಮತದಾನದ ಹಕ್ಕನ್ನು ಕೂಡ ಹೊಂದಿದ್ದರೂ ಮನೆಯಿಂದ ಹೊರದಬ್ಬಿ ಮನೆಯನ್ನು ಕೆಡವಿ ಹಾಕಲಾಗಿದೆ. ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸದೆ, ವಾಸಕ್ಕೆ ಯೋಗ್ಯವಲ್ಲದ ಯಾವುದೋ ಗೋದಾಮಿನಲ್ಲಿ ವಾಸ್ತವಕ್ಕೆ ತಾತ್ಕಲಿಕ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ಮಾನವೀಯ ಕೃತ್ಯ ಎಂದು ಖಂಡಿಸಿದರು.
ಪರ್ಯಾಯ ವ್ಯವಸ್ಥೆ ಮಾಡಿ: ತಮ್ಮ ಹಕ್ಕನ್ನು ಕೇಳುತ್ತಿರುವ ಸಂತ್ರಸ್ತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗಿದೆ. ಮಳೆ ಬೀಳುತ್ತಿರುವ ವೇಳೆ ಕನ್ನಡಿಗರು ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವವರಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಗೋವಾ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.
ಗೋವಾ ಸರ್ಕಾರ ಕೂಡಲೇ ಕನ್ನಡಿಗರ ನೆರವಿಗೆ ಬಂದು ಪರಿಹಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೇ ಕನ್ನಡಿಗರ ಮಧ್ಯೆ ಬಾಳುತ್ತಿರುವ ಗೋವಾ ಪ್ರಜೆಗಳನ್ನು ರಾಜ್ಯದಿಂದ ಒಕ್ಕಲೆಬ್ಬಿಸುವ ಕೆಲಸ ರಾಜ್ಯಾದ್ಯಂತ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್, ಶಿವು, ಗಿರೀಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

