ಪತ್ರಿಕೆಗಳು ನೊಂದವರ ಧ್ವನಿಯಾಗಲಿ
ಹಾಸನ: ಪತ್ರಿಕೆಗಳು ಸಮಾಜದಲ್ಲಿ ನೊಂದವರ ಧ್ವನಿಯಾಗಿ ಕೆಲಸ ನಿರ್ವಹಿ ಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಇತ್ತೀಚೆಗೆ ನಡೆದ ದರ್ಪಣ ಮಾಹಿತಿ ಕೈಪಿಡಿಯ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ,ದೃಶ್ಯ ಹಾಗೂ ಮುದ್ರಣ ಮಾಧ್ಯಗಳು ಸಮಾಜದಲ್ಲಿ ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ಕರ್ತವ್ಯ ಮಾಡಬೇಕು ಎಂದರು.
ಅಪಾಧಿಗಳ ಬಗ್ಗೆ ಎಚ್ಚರ: ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗುವ ಪೊಲೀಸ್ ನ್ಯೂಸ್ ಮುಂತಾದ ಅಪರಾಧಗಳಿಗೆ ಸಂಬಂಧಿಸಿದ ವಿಷಯಗಳು ಎಚ್ಚರಿಕೆಯ ಗಂಟೆಯೆಂದೇ ಪರಿಗಣಿಸಿ ನಾಗರಿಕರು ಅಪರಾಧಿಗಳ ಬಗ್ಗೆ ಜಾಗೃತರಾಗಬೇಕು. ಅಪರಾಧ ತಡೆ ಗಟ್ಟುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ನಾಗರಿಕರು ಕೂಡ ಕೈಜೋಡಿಸಬೇಕು ಎಂದರು. ದರ್ಪಣ ಮಾಹಿತಿ ಕೈಪಿಡಿ ಬಿಡುಗಡೆ ಮಾಡಿದ ರಾಮಕೃಷ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಿ.ಎಸ್. ಕೃಷ್ಣಸ್ವಾಮಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆಗಳು ಬಹಳ ಬೇಗನೆ ಹುಟ್ಟು ಸಾವು ಕಾಣುತ್ತಿವೆ. ಪತ್ರಿಕೋದ್ಯಮ ಬಹಳ ಜವಾಬ್ದಾರಿಯುತ ಕ್ಷೇತ್ರ ವಾಗಿರುವುದರಿಂದ ಏಕಪಕ್ಷೀಯವಾಗಿ ವರ್ತಿಸದೆ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು ಎಂದು ನುಡಿದರು.
ಸನ್ಮಾನ: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಂ. ಶಿವಣ್ಣ, ಬಿ.ವಿ. ಲೋಕೇಶ್ ಹಾಗೂ ಪತ್ರಕರ್ತೆ ಲೀಲಾವತಿ ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತ ಆರ್.ಪಿ. ವೆಂಕಟೇಶ್ಮೂರ್ತಿ ಇದ್ದರು. ದರ್ಪಣ ಮಾಹಿತಿ ಕೈಪಿಡಿ ಸಂಪಾದಕ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಬಿ.ವೇದಾವತಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

