ಬಿಜೆಪಿ ಬಲಪಡಿಸಲು ಕಾರ್ಯಕರ್ತರು ಶ್ರಮಿಸಲಿ
ಕನ್ನಡಪ್ರಭ ವಾರ್ತೆ ್ಣ ಹಾರನಹಳ್ಳಿ ್ಣ ಜು.19
ಪಕ್ಷದ ಸಂಘಟನೆ, ಕಾರ್ಯಕ್ಷಮತೆ ನೇರ ನುಡಿ, ಇದನ್ನು ಅರಿತು ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕೆಂದು ಮೈಸೂರು ವಿಭಾಗದ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸುರೇಶ್ ಬಾಬು ಹೇಳಿದರು.
ತಾಲೂಕಿನ ಸುಕ್ಷೇತ್ರ ಯಾದಾಪುರ ಜೇನುಕಲ್ ಸಿದ್ದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಗ್ರಾಮ ಪಂಚಾಯಿತಿ, ತಾಪಂ, ಹಾಗೂ ಜಿಪಂ ಚುನಾವಣೆಗಳಲ್ಲಿ ಪಕ್ಷ ಸಂಘಟನೆಗೆ ಕಾರ್ಯಕರ್ತರು ಮುಂದಾಗಬೇಕು ಎಂದರು.
ಪಕ್ಷ ಸಂಘಟನೆ ಮಾಡಿ: ಹಿಂದೆ ಬಿಜೆಪಿ ಸರ್ಕಾರದ ಸಮಯದ ಅಭಿವೃದ್ಧಿ ಹಾಗೂ ಯೋಜನೆಗಳು, ಪ್ರಸ್ತುತ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಸಾರ್ವಜನಿಕವಾಗಿ ತಿಳಿಸಿ ಪಕ್ಷ ಸಂಘಟನೆಗೆ ಮುಂದಾಗಬೇಕೆಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರೇಣುಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಹಾಸನ ಜಿಲ್ಲೆಯಲ್ಲಿ ಬಲಪಡಿಸಲು ಜಿಲ್ಲೆಯ ಎಲ್ಲಾ ಕಾರ್ಯಕರ್ತರುಗಳು ಕಾರ್ಯನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿ ತಳಹಂತದಿಂದ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ ಎಂದು ನುಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮೇದಪ್ಪ, ಆಡುವಳ್ಳಿ ಪ್ರಕಾಶ್, ಜೈ ಮಾರುತಿ, ದುಮ್ಮೇನಹಳ್ಳಿ ಗಂಗಾಧರ್, ಚನ್ನರಾಯಪಟ್ಟಣ ರಂಗೇಗೌಡ, ಹಾಸನ ನವಿಲೆ ಯೋಗೀಶ್, ಸಕಲೇಶಪುರ ರಾಜ್ ಕುಮಾರ್, ಹಾಸನ ಶ್ರೀನಿವಾಸ್ ಎಸ್.ಸಿ.ಮೋರ್ಚಾ ಅಧ್ಯಕ್ಷ ರಾಜು, ಆಲೂರು ಕಾಂತೇಗೌಡ, ಚನ್ನರಾಯಪಟ್ಟಣ ರಂಗೇಗೌಡ, ಅರಸೀಕೆರೆ ಹರಳಕಟ್ಟ ರಮೇಶ್, ತಾಲೂಕಿನ ಎಲ್ಲಾ ಬಿಜೆಪಿ ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

