ಬೇಲೂರು ಹಳೇಬೀಡು ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಕನ್ನಡಪ್ರಭ ವಾರ್ತೆ , ಬೇಲೂರು , ಜು. 21
ಬೇಲೂರು ಮತ್ತು ಹಳೇಬೀಡು ನಡುವಿನ ಹೆದ್ದಾರಿ ರಸ್ತೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಮಳೆಯಿಂದಾಗಿ ವಾಹನ ಸಂಚಾರ ದುಸ್ತರವಾಗಿದೆ. ಆದರೆ ಸಂಬಂಧಪಟ್ಟವರು ಇತ್ತ ಇಣಿಕಿಯೂ ನೋಡುತ್ತಿಲ್ಲ.
ಬಾಣಾವರ ಹಾಗೂ ಬೇಲೂರು ರಾಷ್ಟ್ರೀಯ ಹೆದ್ಧಾರಿ 234 ರಸ್ತೆ ಕಳೆದ ಮೂರು ವರ್ಷದ ಹಿಂದೆ ಕಾಮಗಾರಿಗೆ ಚಾಲನೆ ನೀಡಿದ್ದರು. ಗುತ್ತಿಗೆದಾರನ ವಿಳಂಬ ನೀತಿಯಿಂದ ಕಾಮಗಾರಿ ಕುಂಟುತ್ತಾ ಸಾಗಿದೆ. ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆ ಉದ್ದಕ್ಕೂ ಸೇತುವೆಗಳ ನಿರ್ಮಾಣಗೊಳ್ಳುತ್ತಿವೆ. ಇದರಿಂದಾಗಿ ವಾಹನ ಸವಾರರು ರಸ್ತೆಯಲ್ಲಿ ಸರ್ಕಸ್ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ವಿಶೇಷವಾಗಿ ಬೇಲೂರಿನಿಂದ ಹಳೇಬೀಡು ನಡುವೆ ಸುಮಾರು 15 ಸೇತುವೆಗಳನ್ನು ನಿರ್ಮಾಣ ಮಾಡಿದ್ದು, ಸೇತುವೆ ಕಾಮಗಾರಿ ಹತ್ತಿರ ವಾಹನಗಳು ಸಂಚಾರ ಮಾಡುವುದು ಕಷ್ಟಸಾಧ್ಯವಾಗಿದೆ. ಎಂದಿಗೆ ಹೆದ್ದಾರಿ ಕಾಮಗಾರಿ ಮುಕ್ತಾಯವಾಗುತ್ತದೋ ಎಂದು ವಾಹನ ಚಾಲಕರು ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಬಾಣಾವರ ಬೇಲೂರು ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಕಾಮಗಾರಿ ಕೆಲ ಖಾಸಗಿ ವ್ಯಕ್ತಿಗಳ ಭೂಮಿ ವಶ ಮಾಡಿಕೊಳ್ಳುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಅಧಿಕಾರಿಗಳು ಯಾವ ಕಾರಣಕ್ಕೆ ವಿಳಂಬ ನೀತಿ ಅನುಸರಣೆ ಮಾಡುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ.
ಹೆದ್ದಾರಿಯ ಅರ್ಧ ಕಾಮಗಾರಿಯಿಂದ ರಸ್ತೆ ಸ್ಥಿತಿ ಹದಗೆಟ್ಟು ರಸ್ತೆಯಿಂದಾಗಿ ಹಲವಾರು ಅಪಘಾತಗಳು ಸಂಭವಿಸಿವೆ. ಇನ್ನಾದರೂ ಸಂಬಂಧ ಪಟ್ಟ ಇಲಾಖೆ ಅಧಿಕಾರಿ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು. ಇಲ್ಲವಾದರೆ ಪಕ್ಷಾತೀತವಾಗಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಇಲ್ಲಿನ ಹಲವು ಸಂಘಟನೆಗಳು ಎಚ್ಚರಿಕೆ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

