ದೇಶದಲ್ಲಿ ಜಿಹಾದಿ ತೊಲಗಿಸಲು ಆರೆಸ್ಸೆಸ್ನಿಂದ ಮಾತ್ರ ಸಾಧ್ಯ
ಕನ್ನಡಪ್ರಭ ವಾರ್ತೆ,ಸಕಲೇಶಪುರ, ಜು. 21
ಆರ್ಎಸ್ಎಸ್ ಹಾಗೂ ಅದರ ಅಂಗ ಸಂಸ್ಥೆಗಳಿಂದ ಮಾತ್ರ ದೇಶದಲ್ಲಿ ಜಿಹಾದಿ ಭಯೋತ್ಪಾದನೆಗೆ ಅಂತ್ಯ ಹಾಡಲು ಸಾಧ್ಯ ಎಂದು ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿ ಸಂತೋಷ್ ಹೇಳಿದರು.
ಪಟ್ಟಣದ ಹೊಳೆಮಲ್ಲೇಶ್ವರ ದೇವಸ್ಥಾನದಲ್ಲಿ ತಾಲೂಕು ವಿಶ್ವ ಹಿಂದೂಪರಿಷತ್, ಬಜರಂಗದಳದ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಗುರುಪೂಜಾ ಉತ್ಸವದಲ್ಲಿ ಅವರು ಮಾತನಾಡಿದರು.
ಗುರುದಕ್ಷಿಣೆ: ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗಗಳಾಗಿದ್ದು ದೇಶದಲ್ಲಿ ಹಿಂದುತ್ವದ ಉಳಿವಿಗಾಗಿ ವ್ಯಾಪಕವಾಗಿ ಹೋರಾಟ ಮಾಡುತ್ತಿದೆ. ಆರ್ಎಸ್ಎಸ್ನಲ್ಲಿ ಹಲವಾರು ಪ್ರಚಾರಕರುಗಳು ದೇಶಕ್ಕಾಗಿ ತಮ್ಮನ್ನು ಸಂಪೂರ್ಣಾಗಿ ತೊಡಗಿಸಿಕೊಂಡಿದ್ದು ಈ ನಿಟ್ಟಿನಲ್ಲಿ ನಾವು ಅವರುಗಳಿಗಾಗಿ ಗುರುದಕ್ಷಿಣೆಯನ್ನು ಸಮರ್ಪಿಸಬೇಕಾಗಿದೆ ಎಂದರು.
ದೇಶದಲ್ಲಿ ಪ್ರತಿ ನಿತ್ಯ ಲವ್ ಜಿಹಾದ್, ಮತಾಂತರ, ಗೋಹತ್ಯೆ ಹಾಗೂ ಭಯೋತ್ಪಾದನೆಯಂತಹ ಕೃತ್ಯಗಳು ದಿನನಿತ್ಯ ನಡೆಯುತ್ತಿವೆ. ನಮ್ಮ ದೇಶದ ಅವಿಭಾಜ್ಯ ಅಂಗವಾದ ಕಾಶ್ಮೀರವನ್ನು ಜಿಹಾದಿ ಭಯೋತ್ಪಾದಕರು ತಮ್ಮ ಕೈವಶ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದನ್ನೆಲ್ಲಾ ತಡೆಗಟ್ಟಲು ಆರ್ಎಸ್ಎಸ್ ಹಾಗೂ ಇದರ ಅಂಗ ಸಂಸ್ಥೆಗಳಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಸಂಘಟನೆ ವಿರುದ್ಧ ಅಪಪ್ರಚಾರ: ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಂಘದೊಂದಿಗೆ ಸಕ್ರಿಯವಾಗಿ ಕೈಜೋಡಿಸಬೇಕಾಗಿದೆ. ಪಟ್ಟಣದಲ್ಲಿ ಹಿಂದೂ ಸಂಘಟನೆಗಳನ್ನು ಒಡೆಯಲು ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದು ಇಂತಹ ಅಪಪ್ರಚಾರಗಳಿಗೆ ಯಾರು ಕಿವಿ ಕೊಡಬಾರದೆಂದು ಅವರು ಹೇಳಿದರು.
ವಿಹೆಚ್ಪಿಯ ತಾಲೂಕು ಗೌರವಾಧ್ಯಕ್ಷ ಬಾಬುಜೀ ನಗರ್ವಾಲ್ ಅಧ್ಯಕ್ಷತೆ ವಹಿಸಿದ್ದರು. ಡಾ.ರತ್ನಾಕರ್, ಬಜರಂಗದಳದ ಮುಖಂಡರಾದ ವಿಜಯ್ ಕುಮಾರ್, ಧರ್ಮೇಶ್, ಹರೀಶ್ ಆಚಾರ್, ಅಗ್ರಹಾರ ರಮೇಶ್, ಆಟೋ ಲೋಕೇಶ್, ದುಷ್ಯಂತ್, ದೀಪಕ್, ಸಿದ್ದಪ್ಪ, ರಾಮಲಿಂಗಂ, ಕಾರ್ತೀಕ್, ಜಗದೀಶ್, ಸಂದೇಶ್ ಶೆಟ್ಟಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

