ಪರಿಣಾಮಕಾರಿ ಕಾನೂನು ಜಾರಿಗೆ ಸಹಕಾರ ಅಗತ್ಯ
ಆಲೂರು: ಸಮಾಜದಲ್ಲಿ ಅಪರಾಧ, ಅತ್ಯಾಚಾರ ಹಾಗೂ ಲೈಂಗಿಕ ಶೋಷಣೆಗಳು ಅತಿರೇಕಕ್ಕೇರಿದ್ದು ಈ ಪಿಡುಗನ್ನು ನಿಲ್ಲಿಸಲು ಕಾನೂನಿನಲ್ಲಿ ಬಲವಾದ ಕಾಯ್ದೆ ಜಾರಿ ಮಾಡಬೇಕೆಂದು ಸಕಲೇಶಪುರ ಡಿವೈಎಸ್ಪಿ ಸ್ನೇಹ ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಯುವಕರ ಮನಸ್ಸು ಸೂಕ್ಷ್ಮತೆಯಿಲ್ಲದೆ ವಿಕೃತಿಯಿಂದ ಕೂಡಿರುತ್ತದೆ. ಇಂತಹ ಅಪರಾಧಗಳನ್ನು ತಡೆದು, ಪರಿಣಾಮಕಾರಿಯಾಗಿ ಕೆಲಸ ಮಾಡಲು ಪೊಲೀಸ್ ಇಲಾಖೆಗೆ ಸಾರ್ವಜನಿಕರು ಸಲಹೆ, ಸಹಕಾರ ಹಾಗೂ ಮಾರ್ಗದರ್ಶನ ನೀಡಬೇಕು ಎಂದರು. ತಾಲೂಕು ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್. ಮಂಜೇಗೌಡ ಮಾತನಾಡಿ, ರೀತಿ ಅಪರಾಧ ಮಾಡಿದ ಅಪರಾಧಿಗಳಿಗೆ ಕಾನೂನಿನ ಭಯವಿಲ್ಲ. ಅಪರಾಧಿಗಳಿಗೆ ಕಠಿಣ ಶಿಕ್ಷೆಗಳನ್ನು ನೀಡಿದ್ದಲ್ಲಿ ಮಾತ್ರ ಅವರಲ್ಲಿ ಭಯ ಮೂಡಿ, ಅಪರಾಧಗಳನ್ನು ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆಂದರು. ಪ.ಪಂ. ಸದಸ್ಯ ಶಿವಣ್ಣ ಮಾತನಾಡಿ, ಪಟ್ಟಣದಲ್ಲಿ ಅಪರಾಧಗಳು ಹೆಚ್ಚಳವಾಗಿವೆ. ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿ.ವಿ. ಕ್ಯಾಮೆರಾ ಅಳವಡಿಸಬೇಕು. ರಾತ್ರಿ ಗಸ್ತು ಹೆಚ್ಚಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

