ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ
ಹಾಸನ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 1024 ಮೌಲ್ಯದ ಮದ್ಯವನ್ನು ವಶಡಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿ ಕೋಳಗುಂದ ಗ್ರಾಮದ ಪರಮೇಶ ತಮ್ಮ ಪೆಟ್ಟಿಗೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ತೆರಳಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ್ದು, 1024 ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಜಾವಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಜೂಜು: 5 ಮಂದಿ ಬಂಧನ: ಹಾಸನ: ಜೂಜಾಡುತ್ತಿದ್ದ ಐವರನ್ನು ಬಂಧಿಸಿದ್ದು, 3170 ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ, ಮಾಡಾಳು ಗ್ರಾಮದ ಟೆಂಪೋ ಸ್ಟಾಂಡ್ ಹತ್ತಿರ ಅಂದರ್ ಬಾಹರ್ ಜೂಜಾಡುತ್ತಿದ್ದಾಗ ಪಿಎಸ್ಐ ಎಚ್.ಎನ್. ಬಾಲು ದಾಳಿ ನಡೆಸಿ ಮಂಜುನಾಥ, ಗಿರೀಶ, ದೀಪು, ರವಿ ಮತ್ತು ಬಸವರಾಜು ಎಂಬುವರನ್ನು ಬಂಧಿಸಿದ್ದು, ಜೂಜಾಟದಲ್ಲಿ ಪಣಕ್ಕಿಟ್ಟಿದ್ದ 3170 ನಗ್ಟ್ಜ ವಶಪಡಿಸಿಕೊಳ್ಳಲಾಗಿದೆ. ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಗ್ಯಾಸ್ ರಿಫಿಲ್ಲಿಂಗ್- ವ್ಯಕ್ತಿ ಬಂಧನ: ಹಾಸನದಲ್ಲಿ ಅಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, 6 ಸಿಲಿಂಡರ್ ಮತ್ತು ಉಪಕರಣಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಚನ್ನರಾಯಪಟ್ಟಣದ ನಾಗಸಮುದ್ರ ವಾಸಿ ರವೀಶ್ ತೋಟದ ಪಂಪ್ ಹೌಸ್ನಲ್ಲಿ ಅಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದಾಗ ಆಹಾರ ನಿರೀಕ್ಷಕ ರಾಮಚಂದ್ರ ಚನ್ನರಾಯಪಟ್ಟಣ ನಗರ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ವ್ಯಕ್ತಿಯನ್ನು ಬಂಧಿಸಿ 4 ದೊಡ್ಡ ಸಿಲಿಂಡರ್, 2 ಚಿಕ್ಕ ಸಿಲಿಂಡರ್ ಮತ್ತು ತೂಕದ ಯಂತ್ರ ವಶಪಡಿಸಿಕೊಂಡಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿಪ್ಪರ್ ಲಾರಿ ಕಳ್ಳನ ಬಂಧನ: ಹಾಸನದಲ್ಲಿ ಟಿಪ್ಪರ್ ಲಾರಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಾರಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬೇಲೂರು ಠಾಣೆಯ ಪಿಎಸ್ಐ ಆನಂದಕುಮಾರ್ ಸಿಬ್ಬಂದಿಯೊಂದಿಗೆ ಗಸ್ತು ನಿರ್ವಹಿಸುತ್ತಿದ್ದಾಗ ಬೇಲೂರು ನೆಹರು ನಗರದ ಕಡೆಯಿಂದ ಟಿಪ್ಪರ್ ಲಾರಿ ಬರುತ್ತಿದ್ದು, ಲಾರಿಯ ನಂಬರ್ ಇಲ್ಲದಿರುವ ಕಾರಣ ಲಾರಿ ತಡೆದು ಚಾಲಕನನ್ನು ಹಿಡಿದು ಕೇಳಿದಾಗ ಕಳವು ಮಾಡಿರುವ ಬಗ್ಗೆ ತಿಳಿದಿದೆ. ನಂತರ ಆರೋಪಿಯನ್ನು ಲಾರಿ ಸಮೇತ ವಶಪಡಿಸಿಕೊಳ್ಳಲಾಗಿದೆ. ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಯರು ನಾಪತ್ತೆ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವತಿಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿ, ಬಾಳೆಹಳ್ಳಿ ಗ್ರಾಮದ ರಂಗಯ್ಯ ಎಂಬುವರ ಪುತ್ರಿ ಗೀತಾ ಬೆಂಗಳೂರಿಗೆ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವುದಾಗಿ ಹೇಳಿ ಹೋದವಳು ಕೆಲಸಕ್ಕೆ ಹೋಗದೆ ಮನೆಗೆ ಬಾರದೆ ಕಾಣೆಯಾಗಿದ್ದಾರೆ.
5.3 ಅಡಿ ಎತ್ತರ, ಕನ್ನಡ ಬಾಷೆ ಮಾತನಾಡುತ್ತಾಳೆ. ಗೀತಾಳ ತಂದೆ ಶ್ರೀ ರಂಗಯ್ಯ ನುಗ್ಗೇಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಹೊಳೆನರಸೀಪುರ ತಾಲೂಕಿನ ಮರೀಗೌಡ ಎಂಬುವರ ಪುತ್ರಿ ಸೌಮ್ಯ ನಾಪತ್ತೆಯಾಗಿದ್ದಾರೆ.
5.3 ಅಡಿ ಎತ್ತರ, ಗೋದಿ ಬಣ್ಣ, ದುಂಡು ಮುಖ, ಸಾದಾರಣ ಮೈಕಟ್ಟು, ಹಿಂದಿ, ಕನ್ನಡ ಮಾತನಾಡುತ್ತಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

