ಹಾಸನ

ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದರೂ ದನಿ ಎತ್ತದ ಸಚಿವೆ

Published On :

ಬೇಲೂರು: ರಾಜ್ಯ ಸರ್ಕಾರದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾಗಿರುವ ಉಮಾಶ್ರೀಯವರು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಕಂಡರೂ ಕಾಣದಂತಿರುವುದು ವಿಪರ್ಯಾಸವಾಗಿದೆ. ತಕ್ಷಣವೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಾಲಯದ ಕಾರ್ಯದರ್ಶಿ ಎಂ.ಸಿ.ಲತಾ ಒತ್ತಾಯಿಸಿದರು.
ಪಟ್ಟಣದ ಬಿಜೆಪಿ ಕ:ಕೇರಿಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಮೋರ್ಚ ಮಂಡಲ  ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರ ಮೇಲೆ  ಪ್ರತಿನಿತ್ಯ ದೌರ್ಜನ್ಯದಂತಹ ಪ್ರಕರಣಗಳು ನಡೆಯುತ್ತಿದ್ದರೂ, ಇಂತಹ ಘಟನೆಗಳ ಬಗ್ಗೆ  ಸದನದಲ್ಲಿ ದನಿ ಎತ್ತದೆ ಮಹಿಳಾ ವಿರೋಧಿಯಾಗಿ ಉಮಾಶ್ರೀಯವರು ಕೆಲಸ  ಮಾಡುತ್ತಿದ್ದಾರೆ ಎಂದು ಆರೋಪಿಸಿ, ತಕ್ಷಣವೇ ಉಮಾಶ್ರೀ ಯವರು ಮಹಿಳೆ ಮತ್ತು ಮಕ್ಕಳ  ಕಲ್ಯಾಣ ಇಲಾಖೆಯ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.  
ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯ ಕಾರಿಣಿಯ ಸದಸ್ಯೆ ಅನ್ನಪೂರ್ಣ, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯಲಕ್ಷ್ಮಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಮಾತನಾಡಿದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಶೀಲಾ ಅಣ್ಣಪ್ಪ, ತಾ.ಪಂ.ಸದಸ್ಯೆ  ಶಾಂತಮ್ಮ, ಶೈಲಾ, ಅನಿತಾ, ಉಷಾ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.