ಸಮಾಜದಲ್ಲಿ ಸಂಸ್ಕಾರದ ಕೊರತೆ
ಹಾರನಹಳ್ಳಿ (ಅರಸೀಕೆರೆ ತಾ.): ಸಮಾಜದಲ್ಲಿ ಸಂಸ್ಕಾರದ ಕೊರತೆಯಿಂದ ಅತ್ಯಾಚಾರಗಳು ಹೆಚ್ಚಾಗುತ್ತಿವೆ ಎಂದು ಪ್ರಾಂಶುಪಾಲ ನಾಮ್ದೇವ್ ಅಭಿಪ್ರಾಯಪಟ್ಟರು. ಹಾರನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಪೊಲೀಸ್ ಇಲಾಖೆ ಹಾಗೂ ಗ್ರಾ.ಪಂ, ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಮಹಿಳೆ ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತಿದ್ದರು. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ನಮ್ಮ ಕೆಲಸ ಮುಗಿಯಿತು, ಎನ್ನುವುದನ್ನು ಬಿಟ್ಟು ಪ್ರತಿ ದಿನ ಮಕ್ಕಳ ದಿನಚರಿಗಳ ಮೇಲೆ ಕಣ್ಣಿಟ್ಟಿರಬೇಕು ಎಂದು ಹೇಳಿದರು.
ಬಲಿಷ್ಠ ಕಾನೂನು: ಡಿವೈಎಸ್ಪಿ ಸುಜಿತ್ ಮಾತನಾಡಿ, ಅತ್ಯಾಚಾರ, ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಜೀವಾವಧಿ ಶಿಕ್ಷೆ ಬಲಿಷ್ಠ ಕಾನೂನುಗಳಿವೆ. ಇಂದು ಆಕರ್ಷಣೆಯ ಜೀವನಕ್ಕೆ ಮಾರುಹೋಗಿ ಕೆಲವು ಅಪರಾಧ ಪ್ರಕರಣಗಳು ನಡೆಯುತ್ತದೆ. ಸಾರ್ವಜನಿಕರ ಸಹಕಾರವಿದ್ದರೆ ಪೊಲೀಸ್ ಇಲಾಖೆ ಬಲಿಷ್ಠವಾಗಿ ಕೆಲಸಮಾಡುತ್ತದೆ.
ಗ್ರಾಮಾಂತರ ಪ್ರದೇಶದಲ್ಲಿ ಹೆಣ್ಣುಮಕ್ಕಳಿಗೆ ತೊಂದರೆಯಾದರೆ ಪೋಲೀಸ್ ಇಲಾಖೆ ಅಥವಾ ಶಿಕ್ಷಣ ಇಲಾಖೆಗೆ ತಕ್ಷಣ ತಿಳಿಸಿ ಎಂದರು.
ಅರಿವು ಅಗತ್ಯ: ಪೊಲೀಸ್ ವೃತ್ತ ನಿರೀಕ್ಷಕ ಗಂಗಾಧರಪ್ಪ ಮಾತನಾಡಿ, ಪ್ರತಿ ಗುರುವಾರ ತೆರೆದ ಮನೆ ಗ್ರಾಮದಡಿ ಪೊಲೀಸ್ ಇಲಾಖೆ ಗ್ರಾ.ಪಂ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಗ್ರಾಮಗಳಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಹಮ್ಮಿಕೊಮಡಿದ್ದು ಸ್ವಾತಂತ್ರ್ಯ ಬಂದು 6 ದಶಕಗಳು ಕಳೆದರೂ ಅನೇಕ ದೌರ್ಜನ್ಯ ಪ್ರಕರಣಗಳು ನಡೆದಿದ್ದು ಕಾಯ್ದೆಗಳು ಬಲವಾಗಿದ್ದು ಸರಿಯಾದ ಅಪರಾಧಿಗಳಿಗೆ ಶಿಕ್ಷೆ ಆಗುತ್ತಿಲ್ಲ. ಕೆಲವು ರಾಜಿ ಪ್ರಕರಣಗಳಿಂದ ಹಾಗೂ ಸಾಕ್ಷಿ ಕೊರತೆಯಿಂದ ಅಪರಾಧಿಗಳು ಶಿಕ್ಷೆಯಿಂದ ಹೊರಬರುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಸಬ್ಇನ್ಸ್ಪೆಕ್ಟರ್ ಸುನಿಲ್, ಗ್ರಾಪಂ ಸದಸ್ಯ ಓಂಕಾರಮೂರ್ತಿ, ಕೋಡಿಮಠ ಕಾಲೇಜು ಪ್ರಾಂಶುಪಾಲ ಪ್ರೇಮ್ ಕುಮಾರ್, ಮುಖ್ಯಶಿಕ್ಷಕ ಸೋಮಶೇಖರ್ ಶೆಟ್ಟಿ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ್, ಪಿಡಿಒ ಶಾರದಮ್ಮ, ಕಾಲೇಜಿನ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಗ್ರಾಮಸ್ಥರು ವಿದ್ಯಾರ್ಥಿಗಳು ಪೋಷಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

