ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅರೆ ಬೆತ್ತಲೆ ಮೆರವಣಿಗೆ
ಚನ್ನರಾಯಪಟ್ಟಣ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ದಲಿತ ಪರ ಸಂಘಟನೆಗಳ ಕಾರ್ಯಕರ್ತರು ನಡೆಸುತ್ತಿರುವ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸಮಸ್ಯೆಗಳನ್ನು ಆಲಿಸಲು ಯಾವ ಅಧಿಕಾರಿಗಳು ಬಾರದ ಕಾರಣ ಗುರುವಾರ ಪಟ್ಟಣದಲ್ಲಿ ಅರೆ ಬೆತ್ತಲೆಯಾಗಿ ಮೆರವಣಿಗೆ ನಡೆಸಿದರು.
ತಾಲೂಕು ತಹಸೀಲ್ದಾರ್ ಮೊದಲ ದಿನ ಆಗಮಿಸಿ ಸಮಸ್ಯೆಗಳನ್ನು ಆಲಿಸಿದ್ದನ್ನು ಬಿಟ್ಟರೆ ಕಳೆದ ಮೂರು ದಿನಗಳಿಂದ ಯಾವ ಅಧಿಕಾರಿಗಳು ಬಂದಿಲ್ಲ ಎಂದು ಆರೋಪಿಸಿದ ಧರಣಿನಿರತರು ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಅರೆಬೆತ್ತಲೆ ಮೆರವಣಿಗೆ ನಡೆಸಿದರು.
ದಲಿತರಿಗೆ ಅನ್ಯಾಯ: ಪಟ್ಟಣದ ಮೈಸೂರು ರಸ್ತೆಯಲ್ಲಿ ಅಂಬೇಡ್ಕರ್ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಹಲವು ವರ್ಷಗಳು ಕಳೆದರೂ ಪೂರ್ಣಗೊಳಿಸದೆ ದಲಿತ ಸಮುದಾಯಕ್ಕೆ ಅನ್ಯಾಯವೆಸಗುತ್ತಿದ್ದಾರೆ. ಡಿ.ಕಾಳೇನಹಳ್ಳಿ ಬಳಿಯಿರುವ ರುಧ್ರಭೂಮಿ ಜಾಗವನ್ನು ತೆರವುಗೊಳಿಸಿಲ್ಲ. ಪರಿಶಿಷ್ಟರ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಕರೆಯುವ ಸಭೆಯಲ್ಲಿ ಚರ್ಚಿತ ವಿಷಯಗಳು ಬಗೆಹರಿಸುವುದಿಲ್ಲ ಎಂದು ಆರೋಪಿಸಿದರು.
ದಲಿತ ಮುಖಂಡರಾದ ಸೋಮಶೇಖರ್, ಶ್ರೀನಿವಾಸ್, ಮಂಜುನಾಥ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

