ಮನೆ ಮನೆ ಕವಿಗೋಷ್ಠಿಯಲ್ಲಿ ಅಭಿನಂದನೆ
ಹಾಸನ: ಸಕಲೇಶಪುರದಲ್ಲಿ ಜು.26 ರಂದು ನಡೆಯಲಿರುವ ತಾಲೂಕು ಎರಡನೆ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಕವಯತ್ರಿ ಸುಶೀಲಾಸೋಮಶೇಖರ್ ಅವರಿಗೆ ಮನೆ ಮನೆ ಕವಿಗೋಷ್ಠಿ ಸಂಚಾಲಕ ಕೊಟ್ರೇಶ್ ಎಸ್. ಉಪ್ಪಾರ್ ಮತ್ತಿತರ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಮಕ್ಕಳ ಸಾಹಿತ್ಯ, ವೈಚಾರಿಕ ಸಾಹಿತ್ಯ, ಕಾವ್ಯ, ಕಥೆ, ಚಿಂತನಗಳು ಹೀಗೆ ನಾನಾ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಇವರು ನಕ್ಕುಬಿಡೆ ಗೆಳತಿ, ಅಂಗಳ ಅನಾಥವಲ್ಲ, ಮಳೆ ಪುರುಷ, ವಚನ ಸಂವಹನ, ಚಿಗುರು, ನಗುವ ನಕ್ಷತ್ರಗಳು, ನುಡು ಜ್ಯೋತಿರ್ಲಿಂಗ, ಸದ್ದಿಲ್ಲದ ನಗು ಮುಂತಾದ ಹತ್ತಾರು ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿ ಶ್ರೀಮಂತಗೊಳಿಸಿದ್ದಾರೆ.
ಇವರ ಸಾಹಿತ್ಯ ಸೇವೆಗಾಗಿ ರುಕ್ಮಿಣಿ ಬಾಯಿ ಸ್ಮಾರಕ ಸಾಹಿತ್ಯ ಪ್ರಶಸ್ತಿ, ನೀಲಗಂಗಾ ದತ್ತಿ ಪ್ರಶಸ್ತಿ, ಪಂಡಿತ ಪುಟ್ಟರಾಜ ಸಾಹಿತ್ಯ ಪ್ರಶಸ್ತಿ, ಜನಮೆಚ್ಚಿದ ಶಿಕ್ಷಕಿ ಪ್ರಶಸ್ತಿ, ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ, ಕಾವ್ಯಶ್ರೀ ಪ್ರಶಸ್ತಿ, ಮಹಿಳಾ ಪ್ರಶಸ್ತಿ, ಗುಣಸಾಗರಿ ನಾಗರಾಜ ದತ್ತಿ ಪ್ರಶಸ್ತಿ, ಸಿದ್ಧಯ್ಯ ಪುರಾಣಿಕ್ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೇಸರಿ ರತ್ನ ರಾಜಯ್ಯ ದತ್ತಿ ನಿಧಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

