ಹಾಸನ

ಕಾಮುಕರ ಮಟ್ಟಹಾಕಿ ಮಹಿಳೆಯರಿಗೆ ರಕ್ಷಣೆ ನೀಡಿ

Published On :

ಹಾಸನ: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ,ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು  ದೌರ್ಜನ್ಯಗಳನ್ನು ವಿರೋಧಿಸಿ ಜಿಲ್ಲೆ ಹಲವೆಡೆ ಗುರುವಾರ ಪ್ರತಿಭಟನೆ ಮುಂದುವರಿಯಿತು. ಅತ್ಯಾಚಾರ ಖಂಡಿಸಿ ವಿದ್ಯಾರ್ಥಿನಿಯರ ಭದ್ರತೆಗೆ ಒತ್ತಾಯಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಹಾಸನ  ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ಆಕ್ರೋಶ: ಇಂದು ದೇಶದಲ್ಲಿನ ವಿದ್ಯಾರ್ಥಿನಿಯರ ಮತ್ತು ಮಹಿಳೆಯರ ಮೇಲೆ ಅತ್ಯಾಚಾರಗಳು, ದೌರ್ಜನ್ಯಗಳು ದಿನೇದಿನೆ ಹೆಚ್ಚುತ್ತಿರುವುದು ಆಘಾತಕಾರಿ ವಿಚಾರವಾಗಿದೆ. ದೆಹಲಿಯಲ್ಲಿ ನಡೆದ ನಿರ್ಭಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೆ ಬೆಚ್ಚಿ ಬೀಳುವಂತೆ ಮಾಡಿತ್ತು.
ಇಂತಹ ಪ್ರಕರಣಗಳು ನಡೆದ ನಂತರವೂ ಸಹ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾರ್ಥಿನಿಯರ, ಮಹಿಳೆಯರ ಪರವಾದ ಯಾವುದೇ ರೀತಿಯ ಕಠಿಣ ಕಾನೂನುಗಳನ್ನು ಜಾರಿ ಮಾಡದೆ ಮೇಲ್ನೋಟಕ್ಕೆ ಸಮಾಧಾನ ಪಡಿಸುವ ಪ್ರಯತ್ನಕ್ಕೆ ಇಳಿಯುತ್ತಿವೆ ಎಂದು ಹೇಳಿದರು.
ಕಠಿಣ ಕಾನೂನು ಮಾಡಲಿ: ಉತ್ತರ ಪ್ರದೇಶದಲ್ಲಿ ಸರಣಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇದ್ದರೂ ಅಲ್ಲಿನ ಸರ್ಕಾರ ತಡೆಗಟ್ಟುವ ನಿಟ್ಟಿನಲ್ಲಿ  ಹಿಂದುಳಿದಿದೆ. ಅದೇ ರೀತಿ ಬಿಹಾರ, ಒರಿಸ್ಸಾ, ಮಧ್ಯಪ್ರದೇಶಗಳಲ್ಲಿ ಅಪ್ರಾಪ್ತ ಹೆಣ್ಣು  ಮಕ್ಕಳ ಮೇಲೆ, ವಿದ್ಯಾರ್ಥಿನಿಯರ ಮೇಲೆ,ಮಹಿಳೆಯರ  ಮೇಲೆ ನಿರಂತರ ಅತ್ಯಾಚಾರ ದೌರ್ಜನ್ಯಗಳು  ನಡೆಯುತ್ತಿವೆ. ಆದರೆ ಇಂತಹ ಘಟನೆಗಳಿಗೆ ಕೇಂದ್ರದ ಬಿಜೆಪಿ ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೊಳಿಸದೆ ಕಣ್ಣು ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.
 ಕರ್ನಾಟಕ ರಾಜ್ಯದಲ್ಲಿ ಇತ್ತೀಚೆಗೆ ಅತ್ಯಾಚಾರ  ಪ್ರಕರಣಗಳು ಅತಿ ಹೆಚ್ಚು ದಾಖಲಾಗುತ್ತಿವೆ. ಬೆಂಗಳೂರಿನ ಖಾಸಗಿ ಶಾಲೆಯಲ್ಲಿ 6 ವರ್ಷದ ಮಗುವಿನ ಮೇಲೆ ಅಲ್ಲಿನ ಶಿಕ್ಷಕನಿಂದಲೇ ಅತ್ಯಾಚಾರ ನಡೆದಿದೆ. ಆದರೂ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಹಾಸನದಲ್ಲೂ...: ಅದೇ ರೀತಿ ಹಾಸನ ಜಿಲ್ಲೆಯಲ್ಲಿ ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿರುವುದು, ಅರಸಿಕೆರೆಯಲ್ಲಿ ನಡೆದ 2 ಅತ್ಯಾಚಾರಗಳು, ಶಾಲೆಗಳಲ್ಲಿ ನಡೆದ ಪ್ರರಣಗಳು ಹೆಚ್ಚಾಗಿವೆ. ಆದರೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಲ್ಲಿ ರಾಜ್ಯ ಸರ್ಕಾರ ಗಮನವಹಿಸಿಲ್ಲ. ಸರ್ಕಾರದ ಈ ನಿಲುವನ್ನು ಭಾರತ ವಿದ್ಯಾರ್ಥಿ  ್ನ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು.
ಪ್ರತಿಭಟನೆಯಲ್ಲಿ ಎಸ್‌ಎಫ್‌ಐನ ಜಿಲ್ಲಾಧ್ಯಕ್ಷ ಎಚ್.ಇ. ಅನಾಷಾದ್,  ಸಂಚಾಲಕಿ, ಎ.ಡಿ.ಧನಲಕ್ಷ್ಮಿ, ಕಾರ್ಯದರ್ಶಿ ಎಂ.ಜಿ. ಪ್ರದೀಪ್ ಕುಮಾರ್, ವಿದ್ಯಾರ್ಥಿ ಮುಖಂಡರಾದ ದುರ್ಗಾ, ಸುಮ, ಲಾವಣ್ಯ,  ಸಿತಾರ, ಬಿ.ಎ.ಸುಮ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.