ಶಿಕ್ಷಣ ಕಾಯ್ದೆ ಕಡ್ಡಾಯ ಜಾರಿಗೆ ಸೂಚನೆ
ಅರಸೀಕೆರೆ: ಸರ್ಕಾರದ ಕಡ್ಡಾಯ ಶಿಕ್ಷಣ ಕಾಯ್ದೆಯಂತೆ ವಿದ್ಯಾಭ್ಯಾಸ ವಂಚಿತರಾದ ಮತ್ತು ಶಾಲೆಯನ್ನು ಬಿಟ್ಟಿರುವ ಮಕ್ಕಳ ಸಂಖ್ಯೆ ತಾಲೂಕಿನಲ್ಲಿ 227 ಇದ್ದು, ಅವರನ್ನು ಪುನಃ ಶಾಲೆಗಳಿಗೆ ಕರೆತರುವ ಕಾರ್ಯವನ್ನು ತಾಲೂಕಿನ ನಾನಾ ಇಲಾಖೆಗಳ ಸಹಕಾರದಲ್ಲಿ ಮಾಡಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ನಟರಾಜ್ ಇಲ್ಲಿ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಉಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸರ್ಕಾರ ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ಕಟ್ಟು ನಿಟ್ಟಿನಲ್ಲಿ ಜಾರಿಗೆ ತರಲು ಆದೇಶ ಮಾಡಿದೆ ಎಂದರು.
ಪೋಷಕರ ಮನವೊಲಿಸಿ: ತಾಲೂಕಿನ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರ ಮೂಲಕ ಪಟ್ಟಣ ಪ್ರದೇಶವು ಸೇರಿದಂತೆ ಗ್ರಾಮೀಣಾ ಪ್ರದೇಶಗಳಲ್ಲಿ ಅಂತಹ ಮಕ್ಕಳ ಪತ್ತೆ ಕಾರ್ಯವನ್ನು ಕೈಗೊಳ್ಳುವ ಮೂಲಕ ಮಕ್ಕಳ ಮತ್ತು ಪೋಷಕರ ಮನಸ್ಸನ್ನು ಒಲಿಸಿ ಪುನಃ ಶಾಲೆಗಳಿಗೆ ಕರೆತರುವ ಕೆಲಸವನ್ನು ನಾವುಗಳು ಮಾಡಬೇಕಾಗಿದೆ ಎಂದು ಸಭೆಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ನಟರಾಜ್ ಮಾತನಾಡಿ, ಬಹುತೇಕ ಹಿಂದುಳಿದ ವರ್ಗ ಮತ್ತು ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ಕುಟುಂಬದಲ್ಲಿ ಅಂತಹ ಮಕ್ಕಳು ಕಂಡು ಬರುವ ಕಾರಣ ಆ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಿ ಪರಿಶೀಲನೆ ನಡೆಸಲು ಸೂಚಿಸಿದರು.
ಸಭೆಯಲ್ಲಿ ತಾಪಂ ಇಓ ಟಿ.ಎನ್. ಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಾಶ್ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಾಯಕ ಅಧಿಕಾರಿ ಚಂಪಾವತಿ ಮತ್ತು ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ದಿವ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ದಿನೇಶ್, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ದೈಹಿಕ ಪರಿವೀಕ್ಷಕ ಲಕ್ಷ್ಮಣ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರಿಗೌಡ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

