ಮಹಿಳಾ ದೌರ್ಜನ್ಯಕ್ಕೆ ಖಂಡನೆ

Updated on: 

ಆಲೂರು: ನಿರಂತರವಾಗಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗು  ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ಶೋಷಣೆಗಳನ್ನು ಖಂಡಿಸಿ ಪಟ್ಟಣದಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಸಿತು.
 ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ನಂತರ ಮಾತನಾಡಿದ ಕರವೆ ಅಧ್ಯಕ್ಷ ನಟರಾಜ್, ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಪ್ರತಿ ದಿನ 5 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಅತ್ಯಾಚಾರಿಗಳಿಗೆ ಸ್ವರ್ಗವಾಗಿ ಪರಿಣಮಿಸಿದೆ. ಇಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಯಲ್ಲಿ ಇಲ್ಲದಿರುವುದು ಕಾರಣವಾಗಿದೆ ಎಂದು ಖಂಡಿಸಿದರು.
ಇಂತಹವರ ವಿರುದ್ದ ಕಠಿಣ ಕಾನೂನು ಜಾರಿಗೆ ತಂದು ತಕ್ಷವೇ ಅವರಿಗೆ ಉಗ್ರ ಶಿಕ್ಷೆ ನೀಡಬೇಕು. ಇಲ್ಲದಿದ್ದಲ್ಲಿ ಮುಂದೊಂದು ದಿನ ರಾಜ್ಯಕ್ಕೆ ಬರಲು ಬೇರೆಯವರು ಹೆದರಿ ಹಿಂದೆ ಸರಿಯುವ ಸಾಧ್ಯತೆ ಇದೆ. ಅತ್ಯಾಚಾರದ ವಿರುದ್ದ ರಾಜ್ಯ ಸರ್ಕಾರದ ಜನ ಪ್ರತಿನಿಧಿಗಳು ಹಾಗು ಹೆಚ್ಚಿನ ಮುತುವರ್ಜಿವಹಿಸಿ ಕೆಲಸ ಮಾಡಬೇಕೆಂದರು.  ಗೌರವಾಧ್ಯಕ್ಷ ರಾಜಪ್ಪ ನಗರಾಧ್ಯಕ್ಷ ಪಿ.ಮಧುಗೌಡ, ಉಪಾಧ್ಯಕ್ಷ ರಘು, ಮೋಹನ್ ಕುಮಾರ, ಖಜಾಂಚಿ ಗುರು, ಕಾರ್ಯದರ್ಶಿ ದಿವಕರ್, ಚಂದ್ರೇಗೌಡ ಸಂತೋಷ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com