ವಾಹನದಲ್ಲಿ ಅನಧಿಕೃತ ಗ್ಯಾಸ್ಕಿಟ್ ಬಳಕೆ ನಿಷಿದ್ಧ
ಕನ್ನಡಪ್ರಭ ವಾರ್ತೆ, ಹಾಸನ. ಜು 25
ಅನಧಿಕೃತ ಗ್ಯಾಸ್ ಸಿಲಿಂಡರ್ ಅಳವಡಿಸಿರುವ ಒಮ್ನಿ ವಾಹನಗಳಲ್ಲಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವುದು ಕಾನೂನುಬಾಹಿರ. ಇಂತಹ ವಾಹನಗಳ ತಪಾಸಣೆ ಕಾರ್ಯ ಜು. 27 ಮತ್ತು ಜು. 28ರಂದು ನಡೆಸಲಾಗುವುದು ಎಂದು ಎಸ್ಪಿ ರವಿ ದ್ಯಾಮಪ್ಪ ಚನ್ನಣ್ಣನವರ ತಿಳಿಸಿದ್ದಾರೆ.
ಇಂತಹ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವ ಖಾಸಗಿ ವಾಹನಗಳಲ್ಲಿ, ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಶಿಕ್ಷಣ ಸಂಸ್ಥೆಗಳು, ಪೋಷಕರು ಸಹ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಮಾನವೀಯ: ಹಾಸನ ಜಿಲ್ಲೆಯಾದ್ಯಂತ ಆಟೋಗಳು, ಮಾರುತಿ ಒಮ್ನಿ ಸೇರಿದಂತೆ ಹಲವು ಖಾಸಗಿ ವಾಹನಗಳಲ್ಲಿ ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ತುಂಬುವುದು, ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸುವುದು ಕಂಡುಬಂದಿದೆ. ಏನಾದರೂ ಅನಾಹುತವಾದರೆ ವಾಹನ ಮಾಲೀಕರು, ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಿಸಿ ಟಿವಿ ಕಡ್ಡಾಯ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಲೈಂಗಿಕ ಕಿರುಕುಳ ತಡೆಯುವ ಸಲುವಾಗಿ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿದೆ ಎಂದು ಚನ್ನಣ್ಣನವರ್ ತಿಳಿಸಿದರು.
ಪ್ರತಿ ವಿದ್ಯಾಸಂಸ್ಥೆಯಲ್ಲಿಯೂ ಕಾವಲುಗಾರರನ್ನು ನೇಮಿಸಲೇಬೇಕು. ಹಾಗೂ ಪ್ರತಿ ತಿಂಗಳೂ ಪೋಷಕರ ಸಭೆ ಕರೆಯಬೇಕು. ಇದನ್ನು ನಿರ್ಲಕ್ಷಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

