ಹಾಸನ

ವಾಣಿಜ್ಯ ಮಳಿಗೆಗಳಿಗೆ ಬೀಗ

Published On :

ಬೇಲೂರು: ಪಟ್ಟಣದ ವಾಣಿಜ್ಯ ಮಳಿಗೆಗಳಲ್ಲಿ ಬಾಡಿಗೆ ಬಾಕಿ ಉಳಿಸಿಕೊಂಡಿರುವ ಅಂಗಡಿಗಳಿಗೆ ಪುರಸಭೆಯ ಅಧಿಕಾರಿಗಳು ಶುಕ್ರವಾರ ಸಂಜೆ  ಬೀಗವನ್ನು ಹಾಕಿದರು. ಈ ಸಂದರ್ಭದಲ್ಲಿ ವ್ಯಾಪಾರಸ್ಥರು ಪ್ರತಿರೋಧ ವ್ಯಕ್ತಪಡಿಸಿದರು.
 ಮಳಿಗೆಯ ಬಾಡಿಗೆದಾರ ಜಯಂತ್ ಮಾತನಾಡಿ, ನಮಗೆ ಯಾವುದೇ ರೀತಿಯ ಸೂಚನೆ ಹಾಗೂ ನೋಟಿಸ್ ನೀಡದೆ ಏಕಾಏಕಿ ಬೀಗ ಹಾಕಿದ್ದಾರೆ ಎಂದು ಆರೋಪಿಸಿದರು.
ಸೌಲಭ್ಯ ಕಲ್ಪಿಸಿಲ್ಲ: ಐಡಿಎಸ್ ಎಂಟಿ ವಾಣಿಜ್ಯ ಸಂಕೀರ್ಣದಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯವನ್ನು ಕಲ್ಪಸಿಲ್ಲ. ಶೌಚಾಲಯ ಗಬ್ಬು ನಾರುತ್ತಿದ್ದು ಮಲೀನವಾದ ವಾತಾವರಣ ನಿರ್ಮಾಣವಾಗಿದೆ. ಸರಿಯಾದ ವಿದ್ಯುತ್ ದೀಪಗಳನ್ನು ಅಳವಡಿಸದ ಕಾರಣ ರಾತ್ರಿ ವೇಳೆ ಮಹಿಳೆಯರು ಸಂಕೀರ್ಣದೊಳಗೆ ಬರಲು ಹಿಂಜರಿಯುತ್ತಾರೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.  ಈ ಸಂದರ್ಭದಲ್ಲಿ  ಮಖ್ಯಾಧಿಕಾರಿ ಬಸವರಾಜ್ ಮಾತನಾಡಿ, ವಸೂಲಾತಿಗೆ ಬಂದಾಗಲೆಲ್ಲಾ ಇಲ್ಲಸಲ್ಲದ ಕಾರಣಗಳನ್ನು ಹೇಳಿ ಹಲವಾರು ತಿಂಗಳುಗಳ ಬಾಕಿಯನ್ನು ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ದಿನ ಮಳಿಗೆಗೆ ಬೀಗವನ್ನು ಹಾಕಲಾಗುತ್ತಿದೆ ಎಂದರು. ಪುರಸಭೆ ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.