ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗಿ: ಜಿಪಂ ಅಧ್ಯಕ್ಷೆ
ಹಾಸನ: ಬಡತನ, ಅನಕ್ಷರತೆ, ಮೂಢ ನಂಬಿಕೆಯಿಂದ ದೇಶದ ಜನ ಸಂಖ್ಯೆ ಹೆಚ್ಚುತ್ತಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡು ಜನ ಸಂಖ್ಯೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯ್ತಿ ನೂತನ ಅಧ್ಯಕ್ಷೆ ಭಾಗ್ಯ ತಿಳಿಸಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜೀವನಧಾರಾ ಸೇವಾ ಕೇಂದ್ರ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ನಗರದ ಲಕ್ಷ್ಮೀಪುರ ಬಡಾವಣೆಯಲ್ಲಿರುವ ಜೀವನಧಾರಾ ಸೇವಾ ಕೇಂದ್ರದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
122 ಕೋಟಿ ಜನಸಂಖ್ಯೆ: ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಲಕ್ಷ್ಮಣಗೌಡ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ 33 ಕೋಟಿ ಇದ್ದ ಜನ ಸಂಖ್ಯೆ ಇಂದು 122 ಕೋಟಿ ತಲುಪುತ್ತದೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಜನಸಂಖ್ಯೆ ಹೆಚ್ಚಿದಷ್ಟೂ ಅಭಿವೃದ್ದಿಗೆ ಮಾರಕ ಎಂದರು. ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅರ್ಥಾಸ್ತ್ರ ಪ್ರಾಧ್ಯಾಪಕ ಕೆ.ಡಿ.ಮುರಳೀಧರ್ ಮಾತನಾಡಿ, ಜಗತ್ತಿನ 228 ದೇಶಗಳಲ್ಲಿ ಒಟ್ಟು 720 ಕೋಟಿ ಜನ ಸಂಖ್ಯೆ ಇದ್ದು, ಭಾರತದಲ್ಲೊಂದರಲ್ಲಿಯೇ 128 ಕೋಟಿ ಜನ ಸಂಖ್ಯೆ ಇದ್ದಾರೆ. ಈ ನಿಟ್ಟಿನಲ್ಲಿ ಜಾಗೃತ್ತರಾಗಬೇಕಿದೆ ಎಂದರು.
ಚಾಲಕಗೆ ಸನ್ಮಾನ: ಒಂದೇ ಹೆಣ್ಣು ಮಗುವಿಗೆ ಕುಟುಂಬ ಯೋಜನೆ ಅಳವಡಿಸಿಕೊಂಡು ಇತರರಿಗೆ ಪ್ರೇರೆಪಣೆ ನೀಡುತ್ತಿರುವ ಕೆಎಸ್ಆರ್ಟಿ ಬಸ್ ಚಾಲಕ ಶೈಲೇಶ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ ಕಾರ್ಯಕ್ರಮ ಯೋಜನಾಧಿಕಾರಿ ಡಾ.ವಿಜಯೇಂದ್ರ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಬ್ಬೀರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಎಲ್. ಶಾಮಲಾದೇವಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕ ಎಚ್.ಸಿ. ಚಿದಾನಂದ್, ಡಾ.ಹೇಮಲತಾ, ಡಾ.ರಾಜಗೋಪಾಲ, ಡಾ.ಮಹೇಶ್, ಜಿವನಧಾರಾ ಸೇವಾ ಕೇಂದ್ರದ ನಿರ್ದೇಶಕ ಸಿಸ್ಟರ್ ಬನ್ನಿ ಮತ್ತಿತರರು ಉಪಸ್ಥಿತರಿದ್ದರು.
ಜಾಥಾಕ್ಕೆ ಚಾಲನೆ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ ಸಿಂಗ್ ನಗರದ ಸರ್ಕಾರಿ ನರ್ಸಿಂಗಿ ಕಾಲೇಜಿನಲ್ಲಿ ಜಾಥಾಕ್ಕೆ ಹರಿಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

