ಸ್ವಾತಂತ್ರ್ಯೋತ್ಸವ ಪರೇಡ್ ಸಭೆ
ಹಾಸನ: ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದ ಪರೇಡ್ ಆಕರ್ಷಕವಾಗಿ ನಡೆಯಲು ಎಲ್ಲಾ ವ್ಯವಸ್ಥೆಗೊಳಿಸುವಂತೆ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ತಿಳಿಸಿದರು.
ಅವರು ಇತ್ತೀಚೆಗೆ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಪರೇಡ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯೋತ್ಸವ ಪೆರೆಡ್ನಲ್ಲಿ ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ನಾನಾ ಶಾಲಾ ತುಕಡಿಗಳು ಭಾಗವಹಿಸಲಿದ್ದು, ಪೆರೆಡ್ನಲ್ಲಿ ಭಾಗವಹಿಸುವ ತುಕಡಿಗಳು ಎನ್ಸಿಸಿ ಮತ್ತು ಶಾಲಾ ಮಕ್ಕಳಿಗೆ ಉತ್ತಮ ತರಬೇತಿಯನ್ನು ನೀಡುವುದರೊಂದಿಗೆ ಸಮಾರಂಭದಂದು ಆಕರ್ಷಣೀಯ ಪೆರೆಡ್ ಪ್ರದರ್ಸನ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಪೂರ್ವಭಾವಿ ಪ್ರದರ್ಶನ: ಪೆರೆಡ್ನ ಪೂರ್ವಭಾವಿ ಪ್ರದರ್ಶನ ವ್ಯವಸ್ಥೆಯನ್ನು ಆಗಸ್ಟ್ 11, 12 ಮತ್ತು 13ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದು ಎಲ್ಲರೂ ಸಮವಸ್ತ್ರದಲ್ಲಿ ಹಾಜರಾಗಬೇಕು. ಸಮಾರಂಭದಂದು ಭಾಗವಹಿಸುವ ಶಾಲಾ ಮಕ್ಕಳಿಗೆ ಪೇಡ ಮತ್ತು ಹಾಲಿನ ವ್ಯವಸ್ಥೆ ಮಾಡಬೇಕು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಶ್ಮಿ, ಡಿವೈಎಸ್.ಪಿ ಪರಮೇಶ್ವರ ಹೆಚ್. ಬೀಮಕ್ಕನವರ್, ಸಾರಿಗೆ ಇಲಾಖೆ ಅಧಿಕಾರಿ,. ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ, ವಿವಿಧ ಇಲಾಖಾ ಮುಖ್ಯಸ್ಥರು ಹಾಗೂ ವಿವಿಧ ಶಾಲಾ ಮುಖ್ಯಸ್ಥರು, ಪೊಲೀಸ್ ಇಲಾಖೆಯ ನಾನಾ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

