ಹಾಸನ

ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಅರಿಯಬೇಕು

Published On :

ಕನ್ನಡಪ್ರಭ ವಾರ್ತೆ, ಅರಸೀಕೆರೆ, ಜು. 28
ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಅರಿತು ಅಧ್ಯಾಪಕರ ಮಾರ್ಗದರ್ಶನದಂತೆ ನಡೆದರೆ ವಿದ್ಯಾರ್ಥಿ ಜೀವನದಲ್ಲಿ ಸಾಕಷ್ಟು ಪ್ರಗತಿ ಹೊಂದಲು ಸಾಧ್ಯವೆಂದು ಶ್ರೀ ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎ.ನಾಗೇಶರಾವ್ ತಿಳಿಸಿದರು.
 ತಾಲೂಕಿನ ಕಣಕಟ್ಟೆಯ ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಆಯೋಜಿಸಿದ್ದ ಸ್ವಾಗತ ಸಮಾರಂಭ-2014 ಮತ್ತು ಗುರು ವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.  
ಇಂಗ್ಲಿಷ್ ಕಲಿಯಿರಿ: ಶಾಲೆಯಲ್ಲಿ ಶಿಕ್ಷಕರು ಮಾಡುವ ಭೋಧನೆ ಮತ್ತು ಅವರು ನೀಡುವ ಸೂಚನೆಗಳನ್ನು ಶ್ರದ್ದೆಯಿಂದ ಪಾಲಿಸಿದ್ದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಬಹುದೆಂದರು. ಇಂದಿನ ಜಾಗತಿಕರಣಕ್ಕೆ ಅನುಗುಣವಾಗಿ ಕಂಪ್ಯೂಟರರ್ಶಿಕ್ಷಣ ಹಾಗೂ ಇಂಗ್ಲೀಷ್ ಭಾಷಾ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
 ಆರ್.ಎನ್.ಕೊಪ್ಪಲು ಮಹದೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಸವರಾಜಪ್ಪ ಮಾತನಾಡಿ, ಗ್ರಾಮಿಣ ಪ್ರದೇಶದಲ್ಲಿ ಈ ಸಂಸ್ಥೆ ಉತ್ತಮ ಶಿಕ್ಷಣವನ್ನು ಬಡವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಅದರ ಸದುಪಯೋಗವನ್ನು ಪಡೆಯಲು ಕರೆ ನೀಡಿದರು
ಮಕ್ಕಳಲ್ಲಿ ಅರಿವು ಮೂಡಿಸಿ: ಹಿರೇಸಾದರಹಳ್ಳಿ ಶ್ರೀ ಕೊಟ್ಟೂರೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕುಮಾರಸ್ವಾಮಿ ಮಾತನಾಡಿ,  ಪ್ರಸ್ತುತ ಪ್ರಚಲಿತ ಘಟನೆಗಳಾದ ಅತ್ಯಾಚಾರ ಪ್ರಕರಣಗಳ ಬಗ್ಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.
 ಅಣೆಗೆರೆ ಕೋಡೀಮಠ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಮಹೇಶ್ವರಪ್ಪ, ಕಲ್ಗುಂಡಿಯ ವಿದ್ಯಾರಣ್ಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ್, ಕಣಕಟ್ಟೆಯ ಶ್ರೀವೀರಭದ್ರೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಉಮೇಶ್ ಬಾಬು, ಕಲ್ಲುಸಾದರಹಳ್ಳಿ ಸರ್ಕಾರಿ ಪ್ರೌಢಶಾಲೆ ಹಿರಿಯ ಶಿಕ್ಷಕರಾದ ರುದ್ರಪ್ಪ ಮಾತನಾಡಿದರು.
ವಿಜ್ಞಾನ ತರಗತಿ: ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಣ್ಯ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಕೆ.ಎ.ಶಶಿಕುಮಾರ್ ಮಾತನಾಡಿ, ಮುಂಬರುವ ದಿನಗಳಲ್ಲಿ ಸಾರ್ವಜನಿಕರ ಆಶಯದಂತೆ ವಿಜ್ಞಾನ ವಿಭಾಗ ಪ್ರಾರಂಭಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
 ಸಮಾರಂಭದಲ್ಲಿ ಐಟಿಐ ಕಾಲೇಜಿನ ಪ್ರಾಂಶುಪಾಲ ಚೇತನ್ ಕುಮಾರ್, ಶಿಕ್ಷಕರಾದ ಶಂಕರಪ್ಪ, ಮೇಲಪ್ಪ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಇದ್ದರು. ಸುಹೇನ್ ಪ್ರಾರ್ಥಿಸಿದರು. ಎಂ.ಸಿಂಧು  ಹಾಗೂ ಎಸ್. ಕಿರಣ್ ನಿರೂಪಿಸಿದರು. ಕೆ. ಎಸ್. ಮಂದಾರ ಸ್ವಾಗತಿಸಿ, ಕೆ.ಸಿ ಚೈತ್ರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.