ಹಾಸನ

ಕಾನೂನು ಸಂಚಾರಿ ರಥಕ್ಕೆ ಚಾಲನೆ

Published On :

ಕನ್ನಡಪ್ರಭ ವಾರ್ತೆ, ಹಾಸನ, ಜು. 29
ಕಾನೂನು ಸಾಕ್ಷರತಾ ರಥದೊಂದಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮದ ಅಂಗವಾಗಿ ರಥದ ಚಾಲನೆ ಮತ್ತು ಉದ್ಘಾಟನೆಯನ್ನು ನಗರದ ವಕೀಲರ ಸಂಘದ ಆವರಣದಲ್ಲಿ ಇತ್ತೀಚೆಗೆ 2ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ  ಕೆ.ಪ್ರಕಾಶ್ ನೆರವೇರಿಸಿದರು.
 ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವರಾಜೇಗೌಡ ಅಧ್ಯಕ್ಷತೆ  ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರ ಕಾರ್ಯದರ್ಶಿ ಸರಸ್ವತಿ ವಿ.ಕೋಸಂದರ್, ಶೀಘ್ರ ವಿಲೇವಾರಿ ನ್ಯಾಯಾಲಯದ ಪೀಠಾಸೀನಾಧಿಕಾರಿ ಕೆ.ಪಿ.ದಿನೇಶ್ ಭಾಗವಹಿಸಿದ್ದರು.
ಅರಿವು-ನೆರವು ಕಾರ್ಯಕ್ರಮ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಕಲಾ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯ್ತಿಗಳು, ಸಹಕಾರಿ ಸಂಘಗಳು, ಸ್ತ್ರೀಶಕ್ತಿ ಸಂಘಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ  ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಸಾಕ್ಷರತಾ ರಥದೊಂದಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮವು ನಡೆಯಿತು.
 ಜು. 30ರಂದು ಬೆಳಗ್ಗೆ 10 ಕ್ಕೆ  ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು(ವಾಣಿವಿಲಾಸ)ದಲ್ಲಿ ಮೊದಲನೇ ಅಧಿವೇಶನ ನಡೆಯಲಿದ್ದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ  ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ  ಆರ್.ಜೆ.ಸತೀಶ್ ಸಿಂಗ್ ಉದ್ಘಾಟನೆ ನೆರವೇರಿಸುವರು. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ  ಜಿ.ಸಿ. ಶಿವಣ್ಣ ಅಧ್ಯಕ್ಷತೆ ವಹಿಸುವರು.
 ರಥದೊಂದಿಗೆ ನಾನಾ ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಮೂಲಭೂತ ಕರ್ತವ್ಯಗಳು, ಹೆಣ್ಣುಮಕ್ಕಳ ಹಾಗೂ ಹೆಣ್ಣು ಶಿಶುವಿನ ಸಂರಕ್ಷಣೆಗಾಗಿ ಇರುವ ಕಾನೂನು ವಿಷಯಗಳಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರ ಕಾರ್ಯದರ್ಶಿ ಸರಸ್ವತಿ ವಿ.ಕೋಸಂದರ್ ತಿಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.