ಹಾಸನ

ಸಮಾಜ ಘಾತಕ ಶಕ್ತಿಗಳ ವಿರುದ್ಧ ಎಚ್ಚರ ವಹಿಸಿ

Published On :

ಭಾರತೀನಗರ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಎಚ್ಚರಿಕೆ ವಹಿಸಬೇಕೆಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ತಿಳಿಸಿದರು. ಇಲ್ಲಿಗೆ ಸಮೀಪದ ಅಣ್ಣೂರು ಸರ್ಕಾರಿ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ಎಂಬ ವಿಷಯ  ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲೆಲ್ಲಿಯೂ ಮಕ್ಕಳ ಮತ್ತು ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿರುವ ಪ್ರಸ್ತುತ ಸಂದರ್ಭದಲ್ಲಿ ಇಂತಹ ಘಟನೆಗಳನ್ನು ತೊಡೆದು ಹಾಕಲು ಪೊಲೀಸರ ಜೊತೆ ಸಾರ್ವಜನಿಕರು ಕೈಜೋಡಿಸಬೇಕೆಂದು ತಿಳಿಸಿದರು.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಡ್ಯ: ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 2014-15ನೇ ಸಾಲಿನಿಂದ ಜಾರಿಗೆ ಬರುವಂತೆ 1 ರಿಂದ 10ನೇ ತರಗತಿಯ ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿಗಳು ಅಂತರ್ಜಲದ ಮುಖಾಂತರ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುವುದು. ಅರ್ಜಿಗಳನ್ನು ಇಲಾಖಾ ವೆಬ್ ಸೈಟ್ ವಿಳಾಸದಲ್ಲಿ ಸಲ್ಲಿಸಬೇಕು. 2ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇದೂವರೆವಿಗೂ ಆನ್‌ಲೈನ್ ನೋಂದಣಿ ಮಾಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ನೋಂದಣಿ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಮುಖ್ಯೋಪಾಧ್ಯಾಯರ ಮುಖಾಂತರ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೂಲ್  ಪ್ರೀ ದೂ-180042521111 ಗೆ ಕರೆ ಮಾಡುವುದು. ಅರ್ಜಿಯನ್ನು ಸಲ್ಲಿಸಲು  ಸೆ. 30  ಕೊನೆಯ ದಿನಾಂಕವಾಗಿದೆ.  ವಿದ್ಯಾರ್ಥಿಗಳು ತಮ್ಮ ಹೆಸರಿನಲ್ಲಿ ಕಡ್ಡಾಯವಾಗಿ ರಾಷ್ಟ್ರೀಕೃತ ಅಥವಾ ಷೆಡ್ಯೂಲ್ ಬ್ಯಾಂಕಿನಲ್ಲಿ ಖಾತೆ ತೆರೆದು ಕಡ್ಡಾಯವಾಗಿ ಬ್ಯಾಂಕಿನ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವುದರಿಂದ ಕಡ್ಡಾಯವಾಗಿ ವಿದ್ಯಾರ್ಥಿ, ವಿದ್ಯಾರ್ಥಿನಿಯ ಹೆಸರಿನಲ್ಲಿ ಖಾತೆ ಹೊಂದಿರಬೇಕು. ಪೋಷಕರ ವಾರ್ಷಿಕ ಆದಾಯ ಮಿತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಡ್ಯ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು (ದೂ-08232-223471) ಮೊದಲನೇ ಅಡ್ಡ ರಸ್ತೆ, ಬಂದೀಗೌಡ ಬಡಾವಣೆ, ಮಂಡ್ಯ ಇಲ್ಲಿ ಸಂಪರ್ಕಿಸಬಹುದು.

ವಸತಿ ರಹಿತ ದೃಢಿಕರಣ ಪತ್ರ ಸಲ್ಲಿಸಲು ಕರೆ
ಮಂಡ್ಯ: ಕಲೆ ಮತ್ತು ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲಾ ಕಲಾವಿದರು, ಸಾಹಿತಿಗಳು, ಸ್ವಂತ ಮನೆ ಇಲ್ಲದೆ ಇರುವವರು ತಾವು ವಾಸಿಸುತ್ತಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ವಸತಿ ರಹಿತ ದೃಢಿಕರಣ ಪತ್ರವನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಾಮಂದಿರ, ಮಂಡ್ಯ ವಿಳಾಸಕ್ಕೆ ಒಂದು ವಾರದೊಳಗೆ ಸಲ್ಲಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವ್ಯಕ್ತಿ ನಾಪತ್ತೆ
ಮಂಡ್ಯ: ನಗರದ ಹೌಸಿಂಗ್ ಬೋರ್ಡ್‌ನ ಮಹದೇವಮ್ಮ  ಪತಿ ಮುತ್ತುರಾಜ್ ಜು.14 ರಿಂದ ನಾಪತ್ತೆಯಾಗಿದ್ದಾರೆ.  ಕಾಣೆಯಾದ ವ್ಯಕ್ತಿಗೆ ವಯಸ್ಸು 34 ವರ್ಷ, 5.2 ಅಡಿ ಎತ್ತರ,  ಎಣ್ಣೆಗೆಂಪು ಬಣ್ಣ ಇದ್ದಾರೆ. ಎಡಕಣ್ಣಿನ ಕೆಳಭಾಗ ಕಪ್ಪು ಮಚ್ಚೆ ಇರುತ್ತದೆ.  ಕಾಣೆಯಾದ ವೇಳೆ ಕಪ್ಪು ಬಣ್ಣದ ಪ್ಯಾಂಟ್, ಪಿಂಕ್ ಬಣ್ಣದ ಶರ್ಟ್  ಧರಿಸಿರುತ್ತಾರೆ.  ಈ ಚಹರೆ ಪಟ್ಟಿಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಕೂಡಲೇ ಮಂಡ್ಯ ಕಂಟ್ರೋಲ್ ರೂಂ - 08232-224888, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 08232-224500, ಪಶ್ಚಿಮ ಠಾಣೆ 08232-224666 ಕ್ಕೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.