ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಆಕ್ರೋಶ
ಕ.ಪ್ರ. ವಾರ್ತೆ, ಕೆ.ಆರ್.ಪೇಟೆ, ಜು.29
ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಖಂಡಿಸಿ, ಕನ್ನಡಿಗರನ್ನು ಒಕ್ಕಲೆಬ್ಬಿಸುತ್ತಿರುವ ಗೋವಾ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಮೈಸೂರಿನಿಂದ ಪಣಜಿ ಹೋಗುತ್ತಿದ್ದ ಗೋವಾ ಕದಂಬ ಸಾರಿಗೆ ಬಸ್ ತಡೆದ ಪ್ರತಿಭಟನಾಕಾರರು ಗೋವಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಮೈಸೂರು-ಚನ್ನರಾಯಪಟ್ಟಣ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ನಂತರ ಪ್ರವಾಸಿ ಮಂದಿರ ವೃತ್ತದಲ್ಲಿ ಎಂ.ಇ.ಎಸ್. ಕಾರ್ಯಕರ್ತರ ಪ್ರತಿಕೃತಿ ದಹಿಸಿ ಮರಾಠಿಗರ ಕನ್ನಡ ವಿರೋಧಿ ನಿಲುವಿನ ವಿರುದ್ಧ ಘೋಷಣೆ ಕೂಗಿದರು. ಮಹಾರಾಷ್ಟ್ರ ಗಡಿ ಭಾಗದ ಕನ್ನಡಿಗರು ಹೆಚ್ಚಾಗಿ ವಾಸವಾಗಿರುವ ಎಲಿಕೇರಿ ಮತ್ತು ಕಳಗಿ ಗ್ರಾಮಗಳಲ್ಲಿ ಕನ್ನಡಿಗರ ಮನೆಗೆ ನುಗ್ಗಿ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿದರು.
ಮಹಾರಾಷ್ಟ್ರ ಸರ್ಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಈ ದೌರ್ಜನ್ಯವನ್ನು ರಾಜ್ಯ ಸರ್ಕಾರ ನಿಯಂತ್ರಿಸಿ ಕನ್ನಡಿಗರಿಗೆ ರಕ್ಷಣೆ ನೀಡಬೇಕು. ಕನ್ನಡ ಶಾಲೆಗಳ ಬಾಗಿಲನ್ನು ಬಲವಂತವಾಗಿ ಮುಚ್ಚಿಸಿರುವ ಮಹರಾಷ್ಟ್ರ ಸರ್ಕಾರ, ಮಹರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಬೇಷರತ್ತಾಗಿ ಕನ್ನಡಿಗರ ಕ್ಷಮೆಯಾಚಿಸಬೇಕು. ಪದೇ ಪದೇ ಕನ್ನಡಿಗರನ್ನು ಕೆಣಕುತ್ತಿರುವ ಎಂ.ಇ.ಎಸ್. ಶಾಸಕ ಸಂಬಾಜಿ ಪಾಟೀಲ್ ಅವರನ್ನು ಶಾಸನ ಸಭೆಯಿಂದ ವಜಾಗೊಳಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಕರವೇ ಅಧ್ಯಕ್ಷ ಎ.ಸಿ.ಕಾಂತರಾಜು, ಕರವೇ ಮುಖಂಡರಾದ ದೊಡ್ಡೇಗೌಡ, ಬಂಡಿಹೊಳೆ ರಂಗನಾಥ್, ಅಸ್ಲಂಪಾಷಾ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಚಿನ್, ಪವನ್, ಸುರೇಶ್, ರಮೇಶ್, ಶ್ರೀನಿವಾಸಮೂರ್ತಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

