ಅನುಮಾನಾಸ್ಪದ ಸಾವು
ಹಾಸನ: ಪತಿ ಹಾಗೂ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ರಂಗೋಲಿಹಳ್ಳದಲ್ಲಿ ಬುಧವಾರ ಸಂಜೆ ನಡೆದಿದೆ. ನಗರದ ರಂಗೋಲಿಹಳ್ಳದ ನಿವಾಸಿ ಕೃಷ್ಣ (45) ಮತ್ತು ಪತ್ನಿ ಸುವರ್ಣ(40) ಎಂಬವರೇ ಮೃತಪಟ್ಟಿರುವ ದಂಪತಿ.
ಕೃಷ್ಣ ಅವರು ಬಟ್ಟೆ ವ್ಯಾಪಾರಿಯಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಮನೆಯಲ್ಲಿ ಪತಿ ಕೃಷ್ಣ ನೇಣು ಬಿಗಿದ ಸ್ಥಿತಿಯಲ್ಲಿ ಹಾಗೂ ಪತ್ನಿ ಸುವರ್ಣ ಅವರ ಮುಖದಲ್ಲಿ ರಕ್ತ ಬರುತ್ತಿದ್ದ ಸ್ಥಿತಿಯಲ್ಲಿ ಇದ್ದರಿಂದ ಇದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇಬ್ಬರ ನಡುವೆ ಮನಸ್ಥಾಪ ಉಂಟಾಗಿ ಈ ಘಟನೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನರೇಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

