ಚರಂಡಿ ಸ್ಲ್ಯಾಬ್ ಸಮರ್ಪಕ ಜೋಡಣೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ಅರಸೀಕೆರೆ ಜು. 30
ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಿ.ಎಚ್.ರಸ್ತೆಯ ಅಕ್ಕಪಕ್ಕದ ಚರಂಡಿಗಳ ಮೇಲೆ ಸ್ಲ್ಯಾಬ್ಗಳನ್ನು ಸರಿಯಾಗಿ ಜೋಡಿಸದ ಕಾರಣ ಅನೇಕ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಚರಂಡಿ ಒಳಗೆ ಬಿದ್ದು ಗಾಯಗೊಂಡ ಘಟನೆಗಳು ನಡೆಯುತ್ತಿದ್ದರೂ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ನಾಗರಿಕರು ದೂರಿದ್ದಾರೆ.
ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಬಿ.ಎಚ್.ರಸ್ತೆ ಪಕ್ಕದಲ್ಲಿನ ಚರಂಡಿಯ ಮೇಲ್ಭಾಗಕ್ಕೆ ಆಳವಡಿಸಿರುವ ಸ್ಲಾಬ್ಗಳು ಅತ್ಯಂತ ಕಳಪೆ ಗುಣಮಟ್ಟದ್ದಾಗಿವೆ. ಅನೇಕ ಕಡೆಗಳಲ್ಲಿ ಚರಂಡಿ ಮೇಲಿನ ಸ್ಲಾಬ್ಗಳು ಮುರಿದು ಬಿದ್ದಿದ್ದು ಇದರಿಂದ ಚರಂಡಿ ನೀರು ಅಲ್ಲಿಯೇ ನಿಂತು ಕೊಳೆತು ನಾರುತ್ತಿದೆ. ಇದರಿಂದಾಗಿ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಸಾಂಕ್ರಾಮಿಕ ರೋಗದ ಭೀತಿಯನ್ನು ಜನರು ಎದುರಿಸುವಂತಾಗಿದೆ.
ಬಾಯ್ತೆರೆದ ಚೆರಂಡಿ: ಕೃಷಿ ಉತ್ಪನ್ನ ಮಾರುಕಟ್ಟೆ ಮುಂಭಾಗದ ಚರಂಡಿಯ ಮೇಲೆ ಸ್ಲಾಬ್ ಆಳವಡಿಸದ ಕಾರಣ ಅಪಘಾತಕ್ಕಾಗಿ ಚರಂಡಿಯು ಬಾಯ್ತೆರೆದು ನಿಂತಿವೆ. ಪ್ರತಿನಿತ್ಯ ಈ ರಸ್ತೆಯಲ್ಲಿ ತಿರುಗಾಡುವ ದ್ವಿಚಕ್ರ ವಾಹನಗಳು ಮತ್ತು ಪಾದಚಾರಿಗಳ ಗಮನಕ್ಕೆ ಚರಂಡಿ ಬಾಯ್ತೆರೆದಿರುವುದು ಕಾಣದೆ ಚರಂಡಿಯೊಳಗೆ ದಿಢೀರನೇ ಬೀಳುತ್ತಿರುವ ಪರಿಣಾಮ ಕೆಲವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ಅನೇಕ ಘಟನೆಗಳು ನಡೆಯುತ್ತಿದೆ.
ಅಲ್ಲದೇ ಪಟ್ಟಣದ ಕಂತೇನಹಳ್ಳಿಯಿಂದ ಕೃಷ್ಣ ಕಲ್ಯಾಣ ಮಂದಿರದವರೆಗೂ ಸುಮಾರು 3 ಕಿ.ಮೀ. ಉದ್ದದ ರಸ್ತೆಯ ಆಸುಪಾಸಿನಲ್ಲಿ ಇಂತಹ ಪರಿಸ್ಥಿತಿ ಕಂಡುಬಂದರೂ ಇಲ್ಲಿನ ಪುರಸಭೆ ಅಧಿಕಾರಿಗಳಾಗಲಿ ಮತ್ತು ಜನಪ್ರತಿನಿಧಿಗಳಾಗಲಿ ಅಥವಾ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ನಾವು ತಂದರೂ ಇದುವರೆಗೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಬಿಜೆಪಿ ನಗರಾಧ್ಯಕ್ಷ ಹಾಗೂ ವಕೀಲ ಕೆ.ವಿ.ಹಿರಿಯಣ್ಣ ಮತ್ತು ಕೆಂಪೇಗೌಡ ಆರೋಪಿಸಿದ್ದಾರೆ.
ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹೆಚ್ಚಿನ ಅನಾಹುತಗಳು ಸಂಭವಿಸುವ ಮುನ್ನವೇ ಕ್ರಮಗಳನ್ನು ಕೈಗೊಳ್ಳಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

