ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೃಷ್ಣ ಸ್ವರ್ಣಸಂದ್ರ
ಮಂಡ್ಯ: ಜಿಲ್ಲಾ 4 ನೇ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ, ಪತ್ರಕರ್ತ ಕೃಷ್ಣ ಸ್ವರ್ಣಸಂದ್ರ ಆಯ್ಕೆಯಾಗಿದ್ದಾರೆ.
ಆಗಸ್ಟ್ 5 ರಂದು ನಗರದ ಕಲಾಮಂದಿರದಲ್ಲಿ ಜರುಗಲಿರುವ ಈ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವಂತೆ ಕೃಷ್ಣ ಅವರನ್ನು ನಗರದ ಬಾಲಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಿ. ವಿ. ನಾಗರಾಜು ಆಯ್ಕೆ ಘೋಷಿಸಿದರು.
ಜಿ.ವಿ.ನಾಗರಾಜು ಮಾತನಾಡಿ, ಎಸ್. ಕೃಷ್ಣಸ್ವರ್ಣಸಂದ್ರ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ ಅವರನ್ನು 4ನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದರು.
ಪರಿಷತ್ನ ಪ್ರಧಾನ ಕಾರ್ಯದರ್ಶಿ ಮಂಡ್ಯ ಸತ್ಯನ್, ಕಸಾಪ ಮಾಜಿ ಅಧ್ಯಕ್ಷ ಕೆ. ಪ್ರಹ್ಲಾದ್ರಾವ್, ಎಂ.ವಿ. ಧರಣೇಂದ್ರಯ್ಯ, ಗಾಯಕ ಶ್ರೀಧರ್, ಸುರೇಶ್, ರಮೇಶ್, ಪುರುಷೋತ್ತಮ್, ಅವಿನಾಶ್ ನಾಗಣ್ಣ, ಸ್ವಾಮಿ, ಶಿವಣ್ಣ ಹಾಜರಿದ್ದರು.
ಸಮ್ಮೇಳನಾಧ್ಯಕ್ಷರ ಪರಿಚಯ: ಎಸ್.ಕೃಷ್ಣಸ್ವರ್ಣಸಂದ್ರ ಸಾಹಿತ್ಯ, ಸಂಘಟನೆ, ಪತ್ರಿಕೋದ್ಯಮ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿದ್ದಾರೆ. 1968ರಲ್ಲಿ ಸ್ವರ್ಣಸಂದ್ರದಲ್ಲಿ ಕೆಂಪೇಗೌಡ ಸಿದ್ದಲಿಂಗಯ್ಯ ಹಾಗೂ ಕೆಂಪಮ್ಮ ದಂಪತಿಗಳ ಪುತ್ರರಾಗಿ ಜನಿಸಿದರು. ಗುತ್ತಲಿನಲ್ಲಿ ಪ್ರಾಥಮಿಕ, ಮೈಷುಗರ್ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಪಿಇಎಸ್ ಕಾಲೇಜಿನಲ್ಲಿ ಪದವಿಗಳಿಸಿ, ಮೈಸೂರಿನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಜಾನಪದ ಎಂಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

