ಹಾಸನ: ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆಗಸ್ಟ್ 1 ರಂದು ಬೆಳಗ್ಗೆ 10 ಕ್ಕೆ ಕಾಲೇಜಿನ ಆವರಣದಲ್ಲಿ ಅಭಿವಿನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಕರಿಸಿದ್ದಪ್ಪ ತಿಳಿಸಿದ್ದಾರೆ.
ಬೆಂಗಳೂರಿನ ಟಿಸಿಎಸ್ ಕೇಂದ್ರದ ಮುಖ್ಯಸ್ಥ ಇ.ಎಸ್. ಚಕ್ರವರ್ತಿ ಕಾರ್ಯಕ್ರಮ ಉದ್ಘಾಟಿಸುವರು. ವಿಶೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ನೇಮಕಾತಿ ಮತ್ತು ತರಬೇತಿ ವಿಭಾಗದ ವಿಶೇಷ ಅಧಿಕಾರಿ ಜಿಯೊ ಡಿಸಿಲ್ವಾ ಭಾಗವಹಿಸುವರು. ಕಾಲೇಜಿನ ಪ್ರಾಂಶುಪಾಲ ಡಾ. ಕರಿಸಿದ್ದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.