ಹಾಸನ

ಅದ್ಧೂರಿ ಸ್ವಾತಂತ್ರ್ಯೋತ್ಸವಕ್ಕೆ ಗ್ರಾಪಂ ಸಭೆಯಲ್ಲಿ ನಿರ್ಧಾರ

Published On :

ಜಾವಗಲ್: ಜಾವಗಲ್‌ನಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯೋತ್ಸವ ಆಚರಿಸಲು ಬುಧವಾರ ಗ್ರಾಪಂ ಕಚೇರಿಯಲ್ಲಿ ಅಧ್ಯಕ್ಷೆ ಕವಿತ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಪಟ್ಟಣದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರೋತ್ಸವದಂದು ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮ ನಡೆಸಿ ಮೆರವಣಿಗೆಯಲ್ಲಿ ಬಂದು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಸಾರ್ವಜನಿಕ ಸಮಾರಂಭ ನಡೆಸಲು ತೀರ್ಮಾನಿಸಲಾಯಿತು. ಪ್ರತಿ ಶಾಲೆಯಿಂದ ಒಂದು ಸಾಂಸ್ಕೃತಿಕ ಕಾರ್ಯಕ್ರಮ, ಮೈಸೂರು ವಿಶ್ವ ವಿದ್ಯಾನಿಲಯದ ಬಿ.ಎ. ಪದವಿಯಲ್ಲಿ ಚಿನ್ನದ ಪದಕ ಪಡೆದಿರುವ ಪಟ್ಟಣದ ಜೆ.ಎಸ್. ಪವಿತ್ರ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಜಾವಗಲ್ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿ ಕೆ.ಬಿ. ಗಾಯಿತ್ರಿರವರಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಯಿತು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಸಂತರಾಜೆಅರಸ್, ಉಪಪ್ರಾಂಶುಪಾಲ ಯೋಗೀಶ್, ಸಹ ಪ್ರಾಧ್ಯಾಪಕ ಶಂಕರಲಿಂಗೇಗೌಡ, ದ್ಯಾವಪ್ಪ, ಮುಖ್ಯ ಶಿಕ್ಷಕ ನಂಜುಂಡಪ್ಪ, ದಾನೇಗೌಡ, ಯೋಗೀಶ್, ಗ್ರಾಪಂ ಸದಸ್ಯರಾದ ಪ್ರಭಾಕರ್, ಲೋಹಿತ್, ಕುಮಾರ್, ಜ್ಯೋತಿ, ಮಂಜುಳಾ, ನಳಿನಾಂಬಿಕ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.