ಡಿಸೆಂಬರ್ನಲ್ಲಿ ಪ್ರವೇಶ ಪರೀಕ್ಷೆ
ಹಾಸನ: 2015ರ ಜುಲೈ 1ರ ಅಧಿವೇಶನಕ್ಕಾಗಿ ಉತ್ತರಕಾಂಡ ರಾಜ್ಯದ ಡೆಹರಾಡೂನ್ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಡಿಸೆಂಬರ್ 1 ಮತ್ತು 2ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ಮುಂದಿನ ಜು.1ರಂತೆ 11 ವರ್ಷದಿಂದ 13ವರ್ಷದೊಳಗಿರುವ (ಅಂದರೆ ದಿನಾಂಕ 02.07.2002 ರಿಂದ 01.01.2004 ರೊಳಗೆ ಜನಿಸಿರುವ) ಬಾಲಕರು ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ವಿವರಣಾ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡ ಅರ್ಜಿ ನಮೂನೆಯನ್ನು ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ 58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ , ಬೆಂಗಳೂರು - 560 025 ಇಲ್ಲಿಂದ ಖಿಏಊ ಈಕಂಂಆಃಉಆಃಖಿ ಖಐಂಈ ಉಊಏಖಆಉ್ಖಃ ಕಿಆಘಆಇಔಊ ಆಖಿ ಖಇಐ, ಖಊಿಔ ಇಏಆಗಆಃ, ಉಊಏಖಆಉ್ಖಃ (ಇಆಃಓ ಈಕಉಊ ಃಕ 01576) ರ ಹೆಸರಿನಲ್ಲಿ ರು. 400 (ಸಾಮಾನ್ಯ ಅಭ್ಯರ್ಥಿಗಳಿಗೆ) ರು. 355 (ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ) ಪಡೆದ ಬ್ಯಾಂಕ್ ಡ್ರಾಫ್ ಕಳುಹಿಸಿ ಪಡೆಯಬಹುದಾಗಿದೆ. ಸೆ. 30 ಅರ್ಜಿ ಸಲ್ಲಿಕೆಗೆ ಅಂತಿಮ ದಿನ. Ú ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589 ಸಂಪರ್ಕಿಸುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

