ಪರಿಹಾರಕ್ಕೆ ಆಗ್ರಹಿಸಿ ಹೆದ್ದಾರಿ ಬಂದ್
ಚನ್ನರಾಯಪಟ್ಟಣ: ಅಪಘಾತವೆಸಗಿದ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಮೃತ ವ್ಯಕ್ತಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಉದಯಪುರ ಸುತ್ತಮುತ್ತಲ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶವ ರಸ್ತೆಯಲ್ಲಿಟ್ಟು ಧರಣಿ ನಡೆಸಿದ ಘಟನೆ ನಡೆಯಿತು. ಶನಿವಾರ ಸಂಜೆ ಅಪಘಾತದಲ್ಲಿ ಮೃತಪಟ್ಟ ತಾಲೂಕಿನ ಅಪ್ಪೇನಹಳ್ಳಿ ಗೇಟ್ನಲ್ಲಿ ಗ್ರಾಮದ ದೇವರಾಜು ಅವರಿಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ತಾತ್ಕಾಲಿಕ ಪರಿಹಾರ ನೀಡಲು ಒಪ್ಪದ ಸಾರಿಗೆ ಸಂಸ್ಥೆಯ ವಿರುದ್ಧ ಉದಯಪುರ ಸುತ್ತಮುತ್ತಲ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನ ನಡೆಸಿದರು. ಅಪಘಾತವೆಸಗಿದೆ ಸಾರಿಗೆ ಸಂಸ್ಥೆಯ ಬಸ್ನ್ನು ಚನ್ನರಾಯಪಟ್ಟಣ ಗ್ರಾಮಾಂತರ ಪೋಲಿಸರು ವಶಕ್ಕೆ ತೆಗೆದುಕೊಂಡು ದೂರು ದಾಖಲಿಸಿದ್ದರೂ, ರಾಜ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ತಾತ್ಕಾಲಿಕ ಪರಿಹಾರ ನೀಡಲು ಒಪ್ಪದ ಕಾರಣ ಶನಿವಾರ ಅಪಘಾತದಲ್ಲಿ ಮೃತಪಟ್ಟ ದುದೈವಿ ದೇವರಾಜು ಮೃತದೇಹವನ್ನು ಹೆದ್ದಾರಿಯಲ್ಲಿಟ್ಟು ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳನ್ನು ಮಾತ್ರ ತಡೆದು ಧರಣಿ ನಡೆಸಿದರು. ಧರಣಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಕೃಷ್ಣ ಅವರು ಸ್ಥಳಕ್ಕೆ ಆಗಮಿಸಿ ಧರಣಿ ನಿರತರನ್ನು ಮನಮೊಲಿಸಿದರಾದರೂ ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಘೋಷಣೆ ಮಾಡಬೇಕೆಂದು ಪಟ್ಟು ಹಿಡಿದಾಗ ಸಾರಿಗೆ ಅಧಿಕಾರಿಗಳನ್ನು ಪೊಲೀಸರು ಕರೆಸಿದ ಸಂದರ್ಭದಲ್ಲಿ 15ಸಾವಿರ ರು.ಗಳನ್ನು ತಾತ್ಕಾಲಿಕ ಪರಿಹಾರ ಘೋಷಣೆ ಮಾಡಿದಾಗ ಧರಣಿ ವಾಪಸ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

