ರವೀಂದ್ರನಾಥ್ಗೆ ನ್ಯಾಯ ಒದಗಿಸಲು ಆಗ್ರಹ
ಹಾಸನ: ಎಡಿಜಿಪಿ ರವೀಂದ್ರ ನಾಥ್ ಅವರಿಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ಗೆ ಮನವಿ ಸಲ್ಲಿಸಿದರು. ರವೀಂದ್ರನಾಥ್ ಮೇಲೆ ಸುಳ್ಳು ಆರೋಪ ಮಾಡಿ ಕಾಫಿ ಶಾಪ್ ನಲ್ಲಿ ಹುಡುಗಿಯ ಫೋಟೊ ತೆಗೆದಿದ್ದಾರೆ ಎಂದು ಆರೋಪ ಮಾಡಿ ಹುಡುಗಿಯ ಕೈಯಲ್ಲಿ ಸುಳ್ಳು ದೂರು ನೀಡಿಸಲಾಗಿದೆ. ಆದ್ದರಿಂದ ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಇದರ ಹಿಂದಿರುವ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಮಿತಿಯ ವಿಭಾಗ ಸಂಚಾಲಕ ಎಚ್.ಪಿ.ಮಂಜು, ಜಿಲ್ಲಾ ಸಂಚಾಲಕಿ ಕಮಲಮ್ಮ, ಕುಮಾರ್, ನಾಗರಾಜು, ಎಸ್.ಆಶೋಕ್, ಜಯಲಕ್ಷ್ಮಮ್ಮ, ಕೆ.ವೈ.ಜಗದೀಶ್ ಹಾಗೂ ಇತರರು ಇದ್ದರು.
ಎಲ್ಲರನ್ನು ರಂಜಿಸಿದ ಮಕ್ಕಳ ಸಾಂಸ್ಕೃತಿಕ ಸಂಜೆ
ಹಾಸನ: ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ಹಾಸನ ತಾಲೂಕು ಘಟಕದಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ ಅಂಗವಾಗಿ ಭಾನುವಾರ ಏರ್ಪಡಿಸಲಾಗಿದ್ದ ಮಕ್ಕಳ ಸಾಂಸ್ಕೃತಿಕ ಸಂಜೆ ಜನರನ್ನು ರಂಜಿಸಿತು.
ಕಾರ್ಯಕ್ರಮವನ್ನು ಅರಕಲಗೂಡು ತಾಲೂಕು ಶ್ರೀಕ್ಷೇತ್ರ ದೊಡ್ಡಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಬಸವಣ್ಣನ ತತ್ವದ ಬಗ್ಗೆ ಕೆಲ ಆಶೀರ್ವಚನ ನೀಡಿದರು. ಬೀರೂರು ಅಕ್ಕಮಹಾದೇವಿ ಮಹಿಳಾ ಸಮಾಜದವರು ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಯತೀಶ್, ಮೈಸೂರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಮಾನಸ ಗಂಗೋತ್ರಿ ಸಹಾಯಕ ಪ್ರಾಧ್ಯಾಪಕಿ ಡಾ.ಎನ್.ಕೆ. ಲೋಲಾಕ್ಷಿ ಇತರರು ಇದ್ದರು. ಆನಂದ ಪಾಟೀಲ್ ಸ್ವಾಗತಿಸಿದರು. ಗೀತಾ, ಸುಜಾತ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

