ಬೇಡಿಕೆ ಈಡೇರಿಕೆಗೆ ಗ್ರಾಮಸ್ಥರ ಆಗ್ರಹ
ಕನ್ನಡಪ್ರಭ ವಾರ್ತೆ ಹಾಸನ ಜೂ. 3
ಒತ್ತುವರಿಯಾಗಿರುವ ಗ್ರಾಮ ಠಾಣಾ ಭೂಮಿಯನ್ನು ತೆರವುಗೊಳಿಸಿ ದಲಿತರಿಗೆ ನಿವೇಶನಗಳನ್ನು ನೀಡುವಂತೆ ಒತ್ತಾಯಿಸಿ ಬೇಲೂರು ತಾಲೂಕಿನ ಮಲ್ಲಾಪುರ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಮಲ್ಲಾಪುರ ಗ್ರಾಮದಲ್ಲಿ ಸುಮಾರು 70 ರಿಂದ 80 ರಷ್ಟು ಮಂದಿ ಪರಿಶಿಷ್ಠ ಜನಾಂಗದವರು ವಾಸ ಮಾಡುತ್ತಿದ್ದು, ಒಂದೇ ಸೂರಿನಡಿ ಎರಡು ಮೂರು ಕುಟುಂಬಗಳು ವಾಸಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಗ್ರಾಮ ಠಾಣದ ಜಾಗವಿದ್ದು, ಆ ಭೂಮಿಯನ್ನು ಗ್ರಾಮದ ಕೆಲವು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಳ್ಳಲು ಸಂಚು ರೂಪಿಸಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಕ್ಕೆ ಸಮುದಾಯ ಭವನ, ಅಂಗನವಾಡಿ, ನಿವೇಶನ ನಿರ್ಮಾಣಕ್ಕಾಗಿ ಮೀಸಲಾಗಿರುವ ಜಾಗವನ್ನು ಅಕ್ರಮವಾಗಿ ಕಬಳಿಸಿಕೊಳ್ಳುತ್ತಿರುವುದು ಸರಿಯಲ್ಲ. ಈ ಜಾಗದಲ್ಲಿ ದಲಿತರಿಗೆ ನಿವೇಶನ ಒದಗಿಸಿ ಕೊಡುವಂತೆ ಒತ್ತಾಯಿಸಿ ಸಕಲೇಶಪುರ ಉಪ ವಿಭಾಗಾಧಿಕಾರಿ, ತಹಶೀಲ್ದಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಮೊದಲೆ ಕಡು ಬಡವರಾಗಿರುವ ಈ ಗ್ರಾಮದ ಜನರು ತುಂಡು ಭೂಮಿಗಾಗಿ ಪರದಾಡುವಂತಾಗಿದೆ. ಒಂದೇ ಸೂರಿನಡಿ ಎರಡುಮೂರು ಕುಟುಂಬಗಳು ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ಉಂಟಾಗಿದ್ದರು ನಮಗಾಗಿ ಮೀಸಲಾದ ಜಾಗವನ್ನು ಇತರರು ಲಪಟಾಸಿದ್ದಾರೆ ಎಂದು ಕಿಡಿಕಾರಿದರು.
ಅಷ್ಟೇ ಅಲ್ಲದೆ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದರಿಂದ ಗ್ರಾಮಸ್ಥರಿಗೆ ಕುಡಿಯಲು ನೀರಿಲ್ಲದಂತಾಗಿದೆ. ಗ್ರಾಮದಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಜಿಲ್ಲಾಧಿಕಾರಿ ಅವರು ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಠಾಣಾ ಜಾಗವನ್ನು ತೆರವುಗೊಳಿಸಿ ದಲಿತರಿಗೆ ನಿವೇಶನ ಹಂಚಿಕೆ ಮಾಡಿಕೊಡಬೇಕು ಹಾಗೂ ಗ್ರಾಮದಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಡಬೇಕು ಎಂದು ಒತ್ತಾಯಿಸಿದರು. ದಲಿತ ಮುಖಂಡರಾದ ಮಲ್ಲೇಶ್, ಮಹೇಶ್, ಪುಟ್ಟಯ್ಯ ಮತ್ತಿತರರು ಹಾಜರಿದ್ದರು.
ಬೇಡಿಕೆಗಳು
ಟಿ ಈ ಗ್ರಾಮ ಠಾಣಾ ಜಾಗವನ್ನು ಕೂಡಲೇ ತೆರವುಗೊಳಿಸಿ ನಿವೇಶನಗಳನ್ನು ದಲಿತರಿಗೆ ಹಂಚಿಕೆ ಮಾಡಿ.
ಟಿ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

