ಹಾಸನಕ್ಕೆ ಸರ್ವೋಚ್ಚ ನ್ಯಾಯಾಧೀಶರ ಭೇಟಿ
ಹಾಸನ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಚ್.ಎಲ್. ದತ್ ಮಂಗಳವಾರ ಹಾಸನ ನಗರಕ್ಕೆ ಭೇಟಿ ನೀಡಿ ಸ್ವಲ್ಪಕಾಲ ಕಳೆದರು.
ಈ ಸಂದರ್ಭದಲ್ಲಿ ಪೊಲೀಸ್ ಪಡೆಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಆರ್.ಜೆ. ಸತೀಶ್, ಹೆಚ್ಚುವರಿ ಜಿಲ್ಲಾ ಪ್ರಧಾನ ನ್ಯಾಯಾಧೀಶ ಡಿ.ವಿ. ಪಾಟೀಲ್, ಹಿರಿಯ ನ್ಯಾಯಾಧೀಶ ವಿಜಯ್, ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್, ಉಪವಿಭಾಗಾಧಿಕಾರಿ ಶರತ್, ತಹಸೀಲ್ದಾರ್ ಮಂಜುನಾಥ್ ಮತ್ತಿತರರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವರಾಜೇಗೌಡ, ಮಾಜಿ ರಾಜ್ಯ ಸಭಾ ಸದಸ್ಯ ಎಚ್.ಕೆ.ಜವರೇಗೌಡ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಸ್ಥಳೀಯ ಅಧಿಕಾರಿಗಳೊಂದಿಗೆ ಅನೌಪ ಚಾರಿಕವಾಗಿ ಮಾತನಾಡಿದ ನ್ಯಾ. ಎಚ್.ಎಲ್.ದತ್, ಕಡೂರಿನ ಮುನಿಸಿಪಲ್ ಹೈಸ್ಕೂಲಿನಲ್ಲಿ ಕಳೆದ ಶಾಲಾ ದಿನಗಳು ಹಾಗೂ ಶಿವಮೊಗ್ಗದಲ್ಲಿನ ಕಾನೂನು ವ್ಯಾಸಂಗದ ಬಗ್ಗೆ ಭಾವನೆಗಳನ್ನು ಹಂಚಿಕೊಂಡರು.
ಹಾಸನದಲ್ಲಿನ ಮಳೆ ಪರಿಸ್ಥಿತಿ, ಕೃಷಿ, ನೂತನ ನ್ಯಾಯಾಲಯ ಕಟ್ಟಡದ ಸ್ಥಿತಿಗತಿಗಳ ಬಗ್ಗೆಯೂ ಅವರು ವಿವರ ಪಡೆದರು. ನಗರದಲ್ಲಿ ಸೇವೆಗೆ ಸಿದ್ಧವಾಗುತ್ತಿರುವ ಹೊಸ ನ್ಯಾಯಾಲಯ ಕಟ್ಟಡ ಅತ್ಯುತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

