ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ವಶ
ಹಾಸನ: ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಅನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ನಗರದ ಹುಣಸಿನಕೆರೆ ಸ್ಲಂ ಬೋರ್ಡ್, ಬನಶಂಕರಿ ಬಡಾವಣೆಯ ಶಫೀ ಖಾನ್ ಎಂಬುವರ ಕಟ್ಟಡದಲ್ಲಿ ಇಡಲಾಗಿದ್ದ 40 ಮೈಕ್ರೋನ್ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ಅನ್ನು ನಗರಸಭೆ ಆಯುಕ್ತ ಕೃಷ್ಣಮೂರ್ತಿ ನೇತೃತ್ವದಲ್ಲಿ ನಾಲ್ಕು ಗೋಡನ್ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡರು.
ಎಸ್.ಆರ್.ಕೆ.ಟ್ರೇಡರ್ಸ್ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ಹೋಲ್ ಸೇಲ್ ಮಾರಾಟ ಮಾಡಲಾಗುತ್ತಿತ್ತು. ದೂರಿನ ಅನ್ವಯ ಮಂಗಳವಾರ ಆ ಕೇಂದ್ರಗಳ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದಾಗ, ಕಳಪೆ ಗುಣಮಟ್ಟದ ಪ್ಲ್ಯಾಸ್ಟಿಕ್ ಇರುವುದು ಬೆಳಕಿಗೆ ಬಂದಿದೆ. ಅದನ್ನು ವಶಪಡಿಸಿಕೊಳ್ಳುವಾಗ ಮಾಲೀಕ ಶಫಿ ಖಾನ್ ಅಡ್ಡಿ ಪಡಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಕಾರ್ಯಾಚರಣೆಯಲ್ಲಿ ಆರೋಗ್ಯಾಧಿಕಾರಿ ಕೃಷ್ಣಮೂರ್ತಿ, ಸ್ಟೀಫನ್ ಪ್ರಕಾಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

